ಬಿಜೆಪಿ ಶಾಸಕ ಎನ್.ವೈ. ಗೋಪಾಲಕೃಷ್ಣ ರಾಜೀನಾಮೆ
ಬೆಂಗಳೂರು: ಚುನಾವಣಾ ಕಾವು ಬರುತ್ತಿದ್ದಂತೆ ಪಕ್ಷಾಂತರ ಪರ್ವ ಜೋರಾಗಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ಕ್ಷೇತ್ರದ ಶಾಸಕ ಎನ್.ವೈ. ಗೋಪಾಲಕೃಷ್ಣ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಶೀಘ್ರದಲ್ಲೇ ಬಿಜೆಪಿ ತೊರೆಯಲಿದ್ದಾರೆ ಎನ್ನಲಾಗಿದೆ.
ಶಿರಸಿಯಲ್ಲಿ ಸ್ವೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ ನಿವಾಸಕ್ಕೆ ಶುಕ್ರವಾರ ಬಂದಿರುವ ಗೋಪಾಲಕೃಷ್ಣ ಸ್ಪೀಕರ್ ಗೆ ತಮ್ಮ ರಾಜಿನಾಮೆಯನ್ನು ಸಲ್ಲಿಸಿದ್ದಾರೆ.
ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜೊತೆಗೆ ಗೋಪಾಲಕೃಷ್ಣ ಅವರು ಮಾತುಕತೆ ನಡೆಸಿದ್ದು, ಬೆಂಬಲಿಗರೊಡನೆ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎನ್ನಲಾಗಿದೆ.
Next Story