ಶಾಸಕ ಸ್ಥಾನಕ್ಕೆ ಜೆಡಿಎಸ್ ನ ಕೆ.ಎಂ.ಶಿವಲಿಂಗೇಗೌಡ ರಾಜೀನಾಮೆ
ಶಿರಸಿ: ಅರಸೀಕೆರೆ ಜೆಡಿಎಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ ತಮ್ಮ ಶಾಸಕ ಸ್ಥಾನಕ್ಕೆ ರವಿವಾರ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ಮುನ್ನೂರಕ್ಕೂ ಅಧಿಕ ಬೆಂಬಲಿಗರು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ತೆರಳಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರ ನಿವಾಸಕ್ಕೆ ಭೇಟಿ ನೀಡಿ ಅಲ್ಲಿನ ಸಭಾಧ್ಯಕ್ಷರ ಕಾರ್ಯಾಲಯದಲ್ಲಿ ವಿಧಾನಸಭಾ ಸದಸ್ಯತ್ವಕ್ಕೆ ರಾಜಿನಾಮೆ ಸಲ್ಲಿಸಿದರು.
ಈಗಾಗಲೇ ಜೆಡಿಎಸ್ ನಿಂದ ಅಂತರ ಕಾಯ್ದುಕೊಂಡಿರುವ ಶಿವಲಿಂಗೇಗೌಡ ಅವರಿಗೆ ತಮ್ಮ ಬೆಂಬಲಿಗರ ಸಭೆಯಲ್ಲಿ ಕಾಂಗ್ರೆಸ್ ಸೇರಲು ಸಹಮತ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಸೇರಲು ಅವರು ತಯಾರಿ ನಡೆಸಿದ್ದಾರೆ.
Next Story