ಬಾಗೇಪಲ್ಲಿ: ಕಾರಿನಲ್ಲಿ ಸಾಗಿಸುತ್ತಿದ್ದ 5.5 ಕೆ.ಜಿ ಚಿನ್ನ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು
ಬಾಗೇಪಲ್ಲಿ: ಕಾರಿನಲ್ಲಿ ಸಾಗಿಸುತ್ತಿದ್ದ ಸುಮಾರು 2.66 ಕೋಟಿ ಮೌಲ್ಯದ 5.585 ಕೆ.ಜಿ ಚಿನ್ನವನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿರುವುದು ಬಾಗೇಪಲ್ಲಿ ಚೆಕ್ಪೋಸ್ಟ್ ಬಳಿ ವರದಿಯಾಗಿದೆ.
ಚೆಕ್ ಪೋಸ್ಟ್ ನಲ್ಲಿ ತಪಾಸಣೆ ವೇಳೆ ಚಿನ್ನ ಸಾಗಿಸುತ್ತಿದ್ದ ಕಾರನ್ನು ತಡೆದಿರುವ ತಪಾಸಣಾ ಸಿಬ್ಬಂದಿ ಚುನಾವಣಾಧಿಕರಿಗಳಿಗೆ ಮಾಹಿತಿ ನೀಡಿದ್ದಾರೆ. ಅದರಂತೆ ಚಿನ್ನ ವಶಕ್ಕೆ ಪಡೆದು ದೂರು ದಾಖಲಿಸಿಕೊಂಡಿರುವ ಅಧಿಕಾರಿಗಳು ಚಿನ್ನವನ್ನು ನ್ಯಾಯಾಲಯದ ವಶಕ್ಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಆಂಧ್ರಪ್ರದೇಶದ ಕರ್ನೂಲಿನ ಚಿನ್ನಾಭರಣ ಮಾರಾಟ ಅಂಗಡಿಯಿಂದ ವಿಜಯವಾಡದ ಚಿನ್ನಾಭರಣ ಮಾರಾಟ ಅಂಗಡಿಗೆ ಈ ಚಿನ್ನವನ್ನು ಸಾಗಿಸಲಾಗುತ್ತಿತ್ತು ಎಂದು ಕಾರಿನಲ್ಲಿದ್ದವರು ಹೇಳಿದ್ದಾರೆ. ಆದರೆ, ನಮ್ಮ ಗಡಿ ಭಾಗದ ಚೆಕ್ಪೋಸ್ಟ್ಗೆ ಬಂದಿದ್ದರಿಂದ ಚಿನ್ನ ವಶಕ್ಕೆ ಪಡೆದು ದೂರು ದಾಖಲಿಸಲಾಗಿದೆ' ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದಲ್ಲಿ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಜಿಲ್ಲೆಗಳ ಗಡಿ ಪ್ರದೇಶಗಳಲ್ಲಿರುವ ಚೆಕ್ಪೋಸ್ಟ್ಗಳಲ್ಲಿ ಕಟ್ಟೆಚ್ಚರ ವಹಿಸಿದೆ.