Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಂದಿನಿ ಬಗ್ಗೆ ಹರಿದಾಡುತ್ತಿರುವ ಸುದ್ದಿ...

ನಂದಿನಿ ಬಗ್ಗೆ ಹರಿದಾಡುತ್ತಿರುವ ಸುದ್ದಿ ಸುಳ್ಳು: ಕೆಎಂಎಫ್ ಸ್ಪಷ್ಟನೆ

8 April 2023 11:22 PM IST
share
ನಂದಿನಿ ಬಗ್ಗೆ ಹರಿದಾಡುತ್ತಿರುವ ಸುದ್ದಿ ಸುಳ್ಳು: ಕೆಎಂಎಫ್ ಸ್ಪಷ್ಟನೆ

ಬೆಂಗಳೂರು: ನಂದಿನಿ ಬ್ರ್ಯಾಂಡ್ ಅನ್ನು  ದೇಶ ವ್ಯಾಪ್ತಿಯಲ್ಲಿ ಮತ್ತಷ್ಟು ವಿಸ್ತರಿಸುವ ಉದ್ದೇಶದಿಂದ ಕೆಎಂಎಫ್ ಮಾರುಕಟ್ಟೆ ವಿಸ್ತೀರ್ಣದ ಬಗ್ಗೆ ಹಲವಾರು ಯೋಜನೆಯನ್ನು ಹಮ್ಮಿಕೊಂಡಿದೆ. 26 ಲಕ್ಷ ಹೈನುಗಾರ ರೈತರ ಶ್ರಮ, 2 ಲಕ್ಷಕ್ಕೂ ಅಧಿಕ ಕಾರ್ಮಿಕರ ದುಡಿಮೆ, 6 ಕೋಟಿಗೂ ಅಧಿಕ ಗ್ರಾಹಕರ ಹಾರೈಕೆಯಿಂದ ಸಂಸ್ಥೆಯು ದೇಶದಲ್ಲಿ ಅತೀ ವೇಗವಾಗಿ ಬೆಳೆಯುತ್ತಿರೋ ಹಾಲು ಉತ್ಪಾದನಾ ಸಂಸ್ಥೆಯಾಗಿ ಬೆಳೆದು ನಿಂತಿದೆ, ಇಂತಹ ಸಂಸ್ಥೆಯ ಬಗ್ಗೆ ಸದ್ಯ ಹರಿದಾಡುತ್ತಿರೋ ಸುದ್ದಿಗಳು ಸುಳ್ಳಾಗಿದ್ದು ಗ್ರಾಹಕರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

ಈ ಸಂಬಂಧ ಕೆಎಂಎಫ್ ಪರವಾಗಿ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ(ಕೆಎಂಎಫ್) ವು ದೇಶದ 2ನೇ ಅತೀ ದೊಡ್ಡ ಸಹಕಾರ ಹಾಲು ಮಹಾಮಂಡಳ ಸಂಸ್ಥೆಯಾಗಿದ್ದು, 26 ಲಕ್ಷ ಗ್ರಾಮೀಣ ರೈತರಿಂದ ದಿನಂಪ್ರತಿ ಸರಾಸರಿ 85 ಲಕ್ಷ ಲೀಟರ್ ಹಾಲನ್ನು ಸಂಗ್ರಹಿಸಿ, ಸುಮಾರು 160ಕ್ಕೂ ಹೆಚ್ಚು ವಿವಿಧ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ರಾಜ್ಯದ ಜನತೆಗೆ ಕಳೆದ 4 ದಶಕಗಳಿಂದ ಒದಗಿಸುತ್ತಿದೆ ಎಂದು ತಿಳಿಸಿದ್ದಾರೆ.

ಹಾಲಿನ ಶೇಖರಣೆಯನ್ನು ಮುಂದಿನ ದಿನಗಳು ಪ್ರತಿನಿತ್ಯ 1 ಕೋಟಿಗೂ ಅಧಿಕ ಲೀಟರ್ ಸಂಗ್ರಹಿಸುವ ಗುರಿಯನ್ನು ಹೊಂದಲಾಗಿದೆ. ಕಳೆದ 5 ವರ್ಷಗಳ ಅವಧಿಯಲ್ಲಿ, ಹಾಲನ ಸರಾಸರಿ ಶೇಖರಣೆ ಶೇ.6 ರಿಂದ 7ರಷ್ಟು ಪ್ರಗತಿಯಾಗಿದೆ. ಮಾರಾಟವು ಶೇ.25 ರಷ್ಟು ಪ್ರಗತಿಯನ್ನು ಸಾಧಿಸುತ್ತಾ, ದೇಶದ ವಿವಿಧ ರಾಜ್ಯಗಳಲ್ಲಿ ತನ್ನ ಮಾರಾಟ ಜಾಲವನ್ನು ವಿಸ್ತರಿಸುತ್ತಾ ಗ್ರಾಹಕರ ಆಯ್ಕೆಯ ನೆಚ್ಚಿನ ಬ್ರ್ಯಾಂಡ್ ಆಗಿದೆ ಎಂದು ಅವರು ಹೇಳಿದ್ದಾರೆ.

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕರ್ನಾಟಕ ಹಾಲು ಮಹಾ ಮಂಡಳ (ಕೆಎಂಎಫ್)ದ ಬಗ್ಗೆ ಕೆಲವು ವದಂತಿಗಳು ಹರಿದಾಡುತ್ತಿದ್ದು, ಕೆಎಂಎಫ್ ಅನ್ನು  ಮತ್ತೊಂದು ದೊಡ್ಡ ಸಹಕಾರಿ ಸಂಸ್ಥೆಯೊಂದಿಗೆ ವಿಲೀನ ಮಾಡಲಾಗುತ್ತದೆ, ನಂದಿನಿ ಬ್ರ್ಯಾಂಡ್  ಅನ್ನು ಮತ್ತೊಂದು ಸಹಕಾರಿ ಸಂಸ್ಥೆಗೆ ಮಾರಾಟ ಮಾಡಲಾಗುತ್ತಿದೆ. ನಂದಿನಿ ಬ್ರ್ಯಾಂಡ್ ಹಾಲು ಇನ್ನೂ ಮುಂದೆ ಮಾರುಕಟ್ಟೆಯಲ್ಲಿ ಲಭ್ಯವಾಗುವುದಿಲ್ಲ ಅನ್ನೋ ಬಗ್ಗೆ ಸಾಕಷ್ಟು ಸುಳ್ಳು ಸುದ್ದಿಗಳು ಹರಿದಾಡುತ್ತಿವೆ ಎಂದು ಅವರು ತಿಳಿಸಿದ್ದಾರೆ.

ಇದೆಲ್ಲವೂ ಸತ್ಯಕ್ಕೆ ದೂರವಾಗಿದ್ದು ಮತ್ತು ಅಂತಹ ಯಾವುದೇ ಬೆಳವಣಿಗೆಗಳು ಕೆಎಂಎಫ್‌ನಲ್ಲಿ ನಡೆದಿಲ್ಲ. ಕೆಎಂಎಫ್ ಹೆಚ್ಚುವರಿಯಾಗಿ ಹಾಲು ಉತ್ಪಾದನೆ ಮಾಡುವುದಕ್ಕಾಗಲಿ, ವ್ಯಾಪಾರ ವೃದ್ಧಿಗೊಸ್ಕರವಾಗಲಿ ದೇಶದ ಯಾವುದೇ ಸಹಕಾರ ಸಂಸ್ಥೆ ಅಥವಾ ಹಾಲು ಉತ್ಪಾದನಾ ಮಹಾಮಂಡಳಗಳೊಂದಿಗೆ ಒಡಂಬಡಿಕೆ ಮಾಡಿಕೊಂಡಿಲ್ಲ ಎಂದು ವ್ಯವಸ್ಥಾಪಕ ನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ.

ಗುಣಮಟ್ಟ ಮತ್ತು ಸ್ಪರ್ಧಾತ್ಮಕ ಬೆಲೆಯ ಮೂಲಕವೇ ಮನೆ ಮಾತಾಗಿರೋ ನಂದಿಸಿ ಹಾಲು ಇತರೆ ಹಾಲಿನ ಬ್ರ್ಯಾಂಡ್ ಗಳಿಗೆ ಪೈಪೋಟಿ ನೀಡುತ್ತಾ ಮಾರುಕಟ್ಟೆಯನ್ನು ವಿಸ್ತರಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ. 

ಇತ್ತೀಚಿನ ವರ್ಷಗಳಲ್ಲಿ ದೇಶದ ಅನೇಕ ನಗರಗಳಲ್ಲಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳು ಲಭ್ಯವಾಗುತ್ತಿದೆ. ಅವುಗಳಲ್ಲಿ ಮಹಾರಾಷ್ಟ್ರದ ಮುಂಬೈ, ಪುಣೆ, ಸೊಲ್ಲಾಪುರ, ದೇಶದ ಮಧ್ಯಭಾಗವಾದ ವಿಧರ್ಭ ಪ್ರಾಂತ್ಯ (ನಾಗ್ಪುರ), ಹೈದರಾಬಾದ್, ಚೆನ್ನೈ, ಕೇರಳ ಮತ್ತು ಗೋವಾದಲ್ಲಿ ಪ್ರತಿ ನಿತ್ಯ 7 ಲಕ್ಷಕ್ಕೂ ಅಧಿಕ ಅಟಲ್ ಹಾಲು ಮತ್ತು ಮೊಸರನ್ನು ಸ್ಥಳೀಯವಾಗಿ ಅಲ್ಲಿನ ಗ್ರಾಹಕರಿಗೆ ಮಾರಾಟ ಮಾಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಗ್ರಾಹಕರು ಎಂದಿನಂತೆ ನಂದಿನಿ ಬ್ರ್ಯಾಂಡ್ ನ  ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಕೊಂಡು ಪ್ರೋತ್ಸಾಹಿಸುವಂತೆ ವ್ಯವಸ್ಥಾಪಕ ನಿರ್ದೇಶಕರು ಮನವಿ ಮಾಡಿದ್ದಾರೆ.

share
Next Story
X