ಸೋಮಣ್ಣಗೆ ಪ್ರಚಾರಕ್ಕೆ ಅವಕಾಶ ಮಾಡಿಕೊಡಿ: ವರುಣಾ ಕಾಂಗ್ರೆಸ್ ಕಾರ್ಯಕರ್ತರಿಗೆ ಸಿದ್ದರಾಮಯ್ಯ ಮನವಿ

ಬೆಂಗಳೂರು: ಮೈಸೂರು ಜಿಲ್ಲೆಯ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಸಚಿವ ಸೋಮಣ್ಣ ಅವರ ಚುನಾವಣಾ ಪ್ರಚಾರಕ್ಕೆ ಕೆಲವರು ಅಡ್ಡಿಪಡಿಸುತ್ತಿರುವ ಬಗ್ಗೆ ವಿಪಕ್ಷ ನಾಯಕ ಹಾಗೂ ವರುಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ರವಿವಾರ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, 'ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರ ಚುನಾವಣಾ ಪ್ರಚಾರಕ್ಕೆ ಕೆಲವರು ಅಡ್ಡಿಪಡಿಸುತ್ತಿರುವುದು ವರದಿಯಾಗಿದೆ.ಇದನ್ನು ನಮ್ಮ ಪಕ್ಷದ ಕಾರ್ಯಕರ್ತರು ಇಲ್ಲವೇ ಬೇರೆಯವರು ಮಾಡಿದ್ದರೆ ಅದು ಸರಿ ಅಲ್ಲ. ಎಲ್ಲ ಅಭ್ಯರ್ಥಿಗಳಿಗೂ ಮುಕ್ತ ಪ್ರಚಾರಕ್ಕೆ ಅವಕಾಶ ಮಾಡಿಕೊಡಬೇಕು' ಎಂದು ಮನವಿ ಮಾಡಿದ್ದಾರೆ.
'ಪ್ರಜಾಪ್ರಭುತ್ವ ವ್ಯವಸ್ಥೆಯಡಿ ನಡೆಯುವ ಚುನಾವಣೆಯಲ್ಲಿ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರಚಾರ ಮಾಡಲು ಅವಕಾಶ ಇದೆ. ಅದಕ್ಕೆ ಅಡ್ಡಿ ಪಡಿಸಬಾರದು. ಅಂತಿಮವಾಗಿ ಮತದಾರರು ತಮ್ಮ ಆಯ್ಕೆಯನ್ನು ತಾವೇ ನಿರ್ಧರಿಸುತ್ತಾರೆ' ಎಂದು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.
ವರುಣಾ ಕ್ಷೇತ್ರದಲ್ಲಿ ಇಂದು (ರವಿವಾರ) ಚುನಾವಣಾ ಪ್ರಚಾರಕ್ಕೆ ಸೋಮಣ್ಣ ಅವರಿಗೆ ಬುಗತಹಳ್ಳಿ ಗ್ರಾಮದಲ್ಲಿ ಕಲೆವು ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿರುವ ಘಟನೆ ನಡೆದಿದೆ.
ಪ್ರತಾಪ ಸಿಂಹಗೆ ತರಾಟೆ: ಶುಕ್ರವಾರ ಸೋಮಣ್ಣ ಪರವಾಗಿ ಪ್ರಚಾರಕ್ಕೆ ತೆರಳಿದ್ದ ಕೊಡಗು- ಮೈಸೂರು ಸಂಸದ ಪ್ರತಾಪ ಸಿಂಹರನ್ನು ಕುಪ್ಯ ಗ್ರಾಮದಲ್ಲಿ ಜನರು ತರಾಟೆಗೆ ತೆಗೆದುಕೊಂಡಿದ್ದರು.
ಇದನ್ನೂ ಓದಿ: ವರುಣಾದಲ್ಲಿ ಬಿಜೆಪಿ ಅಭ್ಯರ್ಥಿ ಸೋಮಣ್ಣ ಕಾರಿಗೆ ಮುತ್ತಿಗೆ, ಸಿದ್ದರಾಮಯ್ಯ ಪರ ಘೋಷಣೆ
ಪ್ರಜಾಪ್ರಭುತ್ವ ವ್ಯವಸ್ಥೆಯಡಿ ನಡೆಯುವ ಚುನಾವಣೆಯಲ್ಲಿ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರಚಾರ ಮಾಡಲು ಅವಕಾಶ ಇದೆ. ಅದಕ್ಕೆ ಅಡ್ಡಿ ಪಡಿಸಬಾರದು.
— Siddaramaiah (@siddaramaiah) April 23, 2023
ಅಂತಿಮವಾಗಿ ಮತದಾರರು ತಮ್ಮ ಆಯ್ಕೆಯನ್ನು ತಾವೇ ನಿರ್ಧರಿಸುತ್ತಾರೆ.
2/2







