ಕೊಡಗಿನ ಯುವಕ ಬೆಂಗಳೂರಿನಲ್ಲಿ ಆತ್ಮಹತ್ಯೆ
ಮಡಿಕೇರಿ ಮೇ 7 : ಕೊಡಗು ಜಿಲ್ಲೆಯ ಯುವಕನೋರ್ವ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಸೋಮವಾರಪೇಟೆ ಕಿರಗಂದೂರುವಿನ ರುಕ್ಮಿಣಿ ಹಾಗೂ ಶಿವಪ್ಪ ಅವರ ಪುತ್ರ ಜಿತೀನ್(22) ಎಂಬಾತನೇ ಆತ್ಮಹತ್ಯೆಮಾಡಿಕೊಂಡ ಯುವಕ ಎಂದು ತಿಳಿದು ಬಂದಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಳೆದ ಒಂದು ವರ್ಷದಿಂದ ಬೆಂಗಳೂರಿನಲ್ಲಿ ಉದ್ಯೋಗ ಮಾಡಿಕೊಂಡಿದ್ದ ಜಿತೀನ್ ವಿಜಯನಗರದ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಘಟನೆ ಕುರಿತು ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Next Story