ಕಲಬುರಗಿ | ಬಿಜೆಪಿ ಡೇಟಾ ಕಾಲ್ ಸೆಂಟರ್ ಮೇಲೆ ಪೊಲೀಸರ ದಾಳಿ: 300ಕ್ಕೂ ಹೆಚ್ಚು ಕಂಪ್ಯೂಟರ್ ಜಪ್ತಿ
ಕಲಬುರಗಿ: ಮತದಾನ ದಿನವಾದ ಇಂದು ನೀತಿಸಂಹಿತೆ ಉಲ್ಲಂಘಿಸಿ ಮತದಾರರಿಗೆ ಬಿಜೆಪಿಗೆ ಮತ ಹಾಕುವಂತೆ ಒತ್ತಡ ಹಾಕಲಾಗುತ್ತಿದೆ ಎನ್ನಲಾದ ಬಿಜೆಪಿ ಡೇಟಾ ಕಾಲ್ ಸೆಂಟರ್ ಮೇಲೆ ಪೊಲೀಸ್ ಆಯುಕ್ತರ ನೇತೃತ್ವದ ತಂಡ ದಾಳಿ ನಡೆಸಿ, 300ಕ್ಕೂ ಹೆಚ್ಚು ಕಂಪ್ಯೂಟರ್ ಗಳನ್ನು ಜಪ್ತಿ ಮಾಡಿದೆ.
ನಗರದ ಸೂಪರ್ ಮಾರ್ಕೆಟ್ ಪ್ರದೇಶ ಸಂಗಮ್ ಕಾಂಪ್ಲೆಕ್ಸ್ ನಲ್ಲಿ ಮತದಾರರಿಗೆ ದೂರವಾಣಿ ಮೂಲಕ ಕರೆ ಮಾಡಿ ಬಿಜೆಪಿ ಮತದಾನ ಮಾಡಿ ಎಂದು ನಿನ್ನೆಯಿಂದ ಕರೆ ಮಾಡಿ ಮತದಾರರಿಗೆ ಕರೆ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ.
ಈ ಹಿಂದೆಯು ಈ ಕಾಲ್ ಸೆಂಟರ್ ಮೇಲೆ ಪರವಾನಗಿ ಇಲ್ಲದೇ ಡೇಟಾ ಕಾಲ್ ಸೆಂಟರ್ ನಿಂದ ಬಿಜೆಪಿ ಅಭ್ಯರ್ಥಿಗಳು ಆಕ್ರಮವಾಗಿ ನಡೆಸುತ್ತಿರುವ ಬಗ್ಗೆ ಜೆಡಿಯು ಅಭ್ಯರ್ಥಿ ಶರಬಸಪ್ಪ ದೂರಿನ ಮೆರಗಿ ದಾಳಿ ನಡೆಸಿ 100ಕ್ಕೂ ಹೆಚ್ಚು ಕಂಪ್ಯೂಟರ್ ವಶ ಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿತ್ತು.
ಈ ಬಗ್ಗೆ ಕಾಂಗ್ರೆಸ್ ಅಭ್ಯರ್ಥಿ ಅಲ್ಲಮಪ್ರಭು ಪಾಟೀಲ್ ದಾಳಿ ವೇಳೆ ಮಾತನಾಡಿ, ಆಕ್ರಮವಾಗಿ ಮತದಾರರಿಗೆ ಮೇಲೆ ಒತ್ತಡ ಆಗುತ್ತಿದವರ ಸೆಂಟರ್ ವಿರುದ್ಧ ಸೂಕ್ತ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.