ನಾಳೆಯಿಂದ ಹಾರ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ: ಸಿಎಂ ಸಿದ್ದರಾಮಯ್ಯ
"ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕ ನೀಡಬಹುದು"
ಬೆಂಗಳೂರು: ಸನ್ಮಾನ ರೂಪದಲ್ಲಿ ಶಾಲು-ಶಲ್ಯಗಳನ್ನು ನೀಡಬೇಡಿ, ಅದರ ಬದಲು ಪುಸ್ತಕಗಳನ್ನು ನೀಡಿ ಎಂದು ನೂತನ ಸಿಎಂ ಸಿದ್ದರಾಮಯ್ಯ ತಮ್ಮ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, 'ನಾಳೆಯಿಂದ ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ. ಇದು ನನ್ನ ಮನೆ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಅನ್ವಯ.ʼ ಎಂದು ಅವರು ಹೇಳಿದ್ದಾರೆ.
ಪ್ರೀತಿ-ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡಬಹುದು. ನಿಮ್ಮೆಲ್ಲರ ಪ್ರೀತಿ-ಅಭಿಮಾನ ಸದಾ ನನ್ನ ಮೇಲಿರಲಿ ಎಂದು ಅವರು ಮನವಿ ಮಾಡಿದ್ದಾರೆ.
ನಾಳೆಯಿಂದ ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ.
— CM of Karnataka (@CMofKarnataka) May 21, 2023
ಇದು ನನ್ನ ಮನೆ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಅನ್ವಯ.
ಪ್ರೀತಿ-ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡಬಹುದು.
ನಿಮ್ಮೆಲ್ಲರ ಪ್ರೀತಿ-ಅಭಿಮಾನ ಸದಾ ನನ್ನ ಮೇಲಿರಲಿ.…