ಮೂಡಿಗೆರೆ | ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ; ಪ್ರಕರಣ ದಾಖಲು
ಚಿಕ್ಕಮಗಳೂರು: ಬಿಜೆಪಿ ಕಾರ್ಯಕರ್ತನೋರ್ವನ ಮೇಲೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಗ್ಗೆ ವರದಿಯಾಗಿದೆ.
ಅಜಿತ್ ಹಲ್ಲೆಗೊಳಗಾದ ಬಿಜೆಪಿ ಕಾರ್ಯಕರ್ತ ಎಂದು ತಿಳಿದು ಬಂದಿದೆ.
ಸುಮಾರು 30 ಮಂದಿ ಯುವಕರ ಗುಂಪೊಂದು ರಸ್ತೆಯಲ್ಲಿ ಅಡ್ಡಗಟ್ಟಿ ಅಜಿತ್ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ಗಾಯಗೊಂಡ ಅಜಿತ್ ಮೂಡಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಬಣಕಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story