ಸಾರಿಗೆ ಇಲಾಖೆಯ 4 ನಿಗಮಗಳ ಅಧ್ಯಕ್ಷರಾಗಿ ರಾಮಲಿಂಗಾ ರೆಡ್ಡಿ ನೇಮಕ
ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮಗಳ ಅಧ್ಯಕ್ಷರಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ನೇಮಕವಾಗಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಅಧ್ಯಕ್ಷರನ್ನಾಗಿ ರಾಮಲಿಂಗಾ ರೆಡ್ಡಿಯವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
Next Story