ಹೈಕೋರ್ಟ್ ಮುಖ್ಯನ್ಯಾಯಮೂರ್ತಿಯಾಗಿ ಎಸ್.ಕೆ.ಮುಖರ್ಜಿ ಇಂದು ಅಧಿಕಾರ ಸ್ವೀಕಾರ
ಬೆಂಗಳೂರು, ಫೆ.22: ಕರ್ನಾಟಕ ಹೈಕೋರ್ಟ್ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಎಸ್.ಕೆ.ಮುಖರ್ಜಿ ನೇಮಕವಾದ ಹಿನ್ನೆಲೆಯಲ್ಲಿ ಅವರಿಗೆ ರಾಜ್ಯಪಾಲ ವಿ.ಆರ್.ವಾಲಾ ಅವರು ಇಂದು ಅಧಿಕಾರ ಪ್ರಮಾಣ ವಚನ ಬೋಧಿಸಲಿದ್ದಾರೆ. ಸೇವಾ ಹಿರಿತನ ಪರಿಗಣಿಸಿ ರಾಷ್ಟ್ರಪತಿ ಪ್ರಣಬ್ಮುಖರ್ಜಿ ಅವರು ಎಸ್. ಕೆ. ಮುಖರ್ಜಿ ಅವರನ್ನು ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಿ ಸೋಮವಾರ ಆದೇಶ ಹೊರಡಿಸಿದ್ದಾರೆ. ಎಸ್.ಕೆ.ಮುಖರ್ಜಿ ಅವರು ಮಂಗಳವಾರ ಸಂಜೆ ರಾಜಭವನದಲ್ಲಿ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
Next Story