6 ಬಾರಿ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್ ಗೆದ್ದು ಮೇರಿ ಕೋಮ್ ವಿಶ್ವದಾಖಲೆ
ಈ ಸಾಧನೆ ಮಾಡಿದ ಮೊದಲ ಮಹಿಳೆ
ಹೊಸದಿಲ್ಲಿ, ನ.24: ಇಲ್ಲಿ ನಡೆಯುತ್ತಿರುವ ಮಹಿಳೆಯರ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಉಕ್ರೇನ್ ನ ಹನ್ನಾ ಒಖೋತಾರನ್ನು ಮಣಿಸಿದ ಭಾರತದ ಮೇರಿ ಕೋಮ್ ವಿಶ್ವದಾಖಲೆ ಬರೆದಿದ್ದಾರೆ. ಈ ಗೆಲುವಿನ ಮೂಲಕ ಮೇರಿ ಕೋಮ್ 6 ಬಾರಿ ವಿಶ್ವ ಚಾಂಪಿಯನ್ ಶಿಪ್ ಗೆದ್ದ ಪ್ರಥಮ ಮಹಿಳೆಯಾಗಿ ಹೊರಹೊಮ್ಮಿದ್ದಾರೆ.
ಈ ಹಿಂದೆ ಕೋಮ್ 2002, 2005, 2006, 2008 ಹಾಗು 2010ರಲ್ಲಿ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಗೆದ್ದಿದ್ದರು.
Next Story