ಅಗ್ರಸ್ಥಾನ ಕಾಯ್ದುಕೊಂಡ ಕೊಹ್ಲಿ, ಬುಮ್ರಾ
ಐಸಿಸಿ ಏಕದಿನ ರ್ಯಾಂಕಿಂಗ್
ದುಬೈ, ಅ.3: ಭಾರತದ ನಾಯಕ ವಿರಾಟ್ ಕೊಹ್ಲಿ ಹಾಗೂ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಗುರುವಾರ ಬಿಡುಗಡೆಯಾದ ಐಸಿಸಿ ಪುರುಷರ ಏಕದಿನ ಆಟಗಾರರ ರ್ಯಾಂಕಿಂಗ್ನಲ್ಲಿ ಅಗ್ರ ಸ್ಥಾನ ಕಾಯ್ದುಕೊಂಡಿದ್ದಾರೆ. ಬ್ಯಾಟಿಂಗ್ ರ್ಯಾಂಕಿಂಗ್ನಲ್ಲಿ ಕೊಹ್ಲಿ ಹಾಗೂ ಉಪನಾಯಕ ರೋಹಿತ್ ಕ್ರಮವಾಗಿ ಮೊದಲ ಹಾಗೂ 2ನೇ ಸ್ಥಾನ ಉಳಿಸಿಕೊಂಡಿದ್ದಾರೆ. ಬೌಲಿಂಗ್ ಪಟ್ಟಿಯಲ್ಲಿ ಬುಮ್ರಾ ಮೊದಲನೇ ಸ್ಥಾನದಲ್ಲಿದ್ದಾರೆ. ಶ್ರೀಲಂಕಾ ವಿರುದ್ಧ ಏಕದಿನ ಸರಣಿಯಲ್ಲಿ 4 ವಿಕೆಟ್ ಬಾಚಿಕೊಂಡ ಪಾಕ್ನ ಮುಹಮ್ಮದ್ ಆಮಿರ್ ಆರು ಸ್ಥಾನ ಭಡ್ತಿ ಪಡೆದು ಜೀವನಶ್ರೇಷ್ಠ 7ನೇ ಸ್ಥಾನ ತಲುಪಿದ್ದಾರೆ. ಏಕದಿನ ತಂಡಗಳ ರ್ಯಾಂಕಿಂಗ್ನಲ್ಲಿ ಪಾಕಿಸ್ತಾನ ಹಾಗೂ ಶ್ರೀಲಂಕಾ 6ನೇ ಹಾಗೂ 8ನೇ ರ್ಯಾಂಕಿನಲ್ಲಿವೆ.
Next Story