ಖೇಲೋ ಇಂಡಿಯಾ ವಿವಿ ಗೇಮ್ಸ್ ವೇಳಾಪಟ್ಟಿ ಪ್ರಕಟಿಸಿದ ಕಿರಣ್ ರಿಜಿಜು
ಭುವನೇಶ್ವರ, ಜ.6: ಮೊದಲ ಆವೃತ್ತಿಯ ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ಸ್ 2020 ಫೆಬ್ರವರಿ 21ರಿಂದ ಆರಂಭವಾಗಲಿದೆ ಎಂದು ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಸೋಮವಾರ ಪ್ರಕಟಿಸಿದರು.
ಕ್ರೀಡಾಕೂಟವು ಮಾ.1ರಂದು ಕೊನೆಗೊಳ್ಳಲಿದ್ದು, ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ಸ್ ನಲ್ಲಿ 17 ವಿವಿಧ ಕ್ರೀಡೆಗಳ ಅಥ್ಲೀಟ್ಗಳು ಭಾಗವಹಿಸಲಿದ್ದಾರೆ. ಒಡಿಶಾದ ಭುವನೇಶ್ವರದಲ್ಲಿ ನಡೆದ ಸಮಾರಂಭದ ವೇಳೆ ಕ್ರೀಡಾಕೂಟದ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಹಾಗೂ ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಖೇಲೋ ಇಂಡಿಯಾ ವಿವಿ ಗೇಮ್ಸ್ನ ಜರ್ಸಿಯನ್ನು ಅನಾವರಣಗೊಳಿಸಿದರು. ರಿಜಿಜು ಹಾಗೂ ಪ್ರಧಾನ್ ಖೇಲೋ ಇಂಡಿಯಾದ ಅಧಿಕೃತ ಲೋಗೊವನ್ನು ಬಿಡುಗಡೆ ಮಾಡಿದರು.
Next Story