ಐಪಿಎಲ್: ಕೆ.ಎಲ್. ರಾಹುಲ್ ಶತಕ
ದುಬೈ, ಸೆ. 24: ಐಪಿಎಲ್ ಟ್ವೆಂಟಿ-20 ಟೂರ್ನಿಯಲ್ಲಿ ಗುರುವಾರ ನಡೆದ 5ನೇ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕ ಕೆ.ಎಲ್. ರಾಹುಲ್ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ವಿರುದ್ಧ ಆಕರ್ಷಕ ಶತಕ ಸಿಡಿಸಿ ಮಿಂಚಿದರು.
18ನೇ ಓವರ್ ನಲ್ಲಿ ಡೇಲ್ ಸ್ಟೇಯ್ನ್ ಎಸೆತದಲ್ಲಿ ಬೌಂಡರಿ ಗಳಿಸಿದ ರಾಹುಲ್ 62 ಎಸೆತಗಳಲ್ಲಿ ಶತಕ ಪೂರೈಸಿದರು. ಇದರಲ್ಲಿ 12 ಬೌಂಡರಿ ಹಾಗೂ 3 ಸಿಕ್ಸರ್ ಗಳಿದ್ದವು. ರಾಹುಲ್ ಐಪಿಎಲ್ ಟೂರ್ನಿಯಲ್ಲಿ ಎರಡನೇ ಬಾರಿ ಶತಕ ದಾಖಲಿಸಿದರು. 13ನೇ ಆವೃತ್ತಿಯ ಐಪಿಎಲ್ ನಲ್ಲಿ ಶತಕದಾಖಲಿಸಿದ ಮೊದಲಿಗ ಎನಿಸಿಕೊಂಡರು.
Next Story