ಐಪಿಎಲ್: ಸನ್ ರೈಸರ್ಸ್ ಹೈದರಾಬಾದ್ 201/6
ಬೈರ್ ಸ್ಟೋವ್, ಡೇವಿಡ್ ವಾರ್ನರ್ ಅರ್ಧ ಶತಕ
ದುಬೈ: ಸನ್ ರೈಸರ್ಸ್ ಹೈದರಾಬಾದ್ ತಂಡ ಗುರುವಾರ ನಡೆದ ಐಪಿಎಲ್ ಟೂರ್ನಿಯ 22ನೇ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ಗಳ ನಷ್ಟಕ್ಕೆ 201 ರನ್ ಕಲೆ ಹಾಕಿದೆ.
ಟಾಸ್ ಜಯಿಸಿದ ಹೈದರಾಬಾದ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಇನಿಂಗ್ಸ್ ಆರಂಭಿಸಿದ ಜಾನಿ ಬೈರ್ ಸ್ಟೋವ್ ಹಾಗೂ ಡೇವಿಡ್ ವಾರ್ನರ್ ಮೊದಲ ವಿಕೆಟ್ ಜೊತೆಯಾಟದಲ್ಲಿ 15.1 ಓವರ್ ಗಳಲ್ಲಿ 160 ರನ್ ಸೇರಿಸಿ ಭದ್ರ ಬುನಾದಿ ಹಾಕಿಕೊಟ್ಟರು,
ಇಂಗ್ಲೆಂಡ್ ಬ್ಯಾಟ್ಸ್ ಮನ್ ಬೈರ್ ಸ್ಟೋವ್ 55 ಎಸೆತಗಳಲ್ಲಿ 7 ಬೌಂಡರಿ, 6 ಸಿಕ್ಸರ್ ಸಿಡಿಸಿದರು. ಡೇವಿಡ್ ವಾರ್ನರ್ 40 ಎಸೆತಗಳಲ್ಲಿ 5 ಬೌಂಡರಿ ಹಾಗೂ 1 ಸಿಕ್ಸರ್ ಸಿಡಿಸಿದರು. ಕೇನ್ ವಿಲಿಯಮ್ಸನ್ ಔಟಾಗದೆ 20 ರನ್ ಗಳಿಸಿದರು.
Next Story