ಮಿಂಚಿದ ಕೊಹ್ಲಿ, ಮೋರಿಸ್ ಆರ್ಭಟ: ಆರ್ಸಿಬಿ ಎದುರು ಪಂಜಾಬ್ ಗೆಲುವಿಗೆ 172 ರನ್ ಗುರಿ
ಶಾರ್ಜಾ: ನಾಯಕ ವಿರಾಟ್ ಕೊಹ್ಲಿ ಹಾಗೂ ಕೊನೆಯಲ್ಲಿ ಕ್ರಿಸ್ ಮೋರಿಸ್ ಪ್ರದರ್ಶಿಸಿದ ಉತ್ತಮ ಬ್ಯಾಟಿಂಗ್ ನಿಂದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ 172 ರನ್ ಗಳ ಗುರಿ ನೀಡಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಿಗದಿತ 20 ಓವರ್ ಗಳಲ್ಲಿ 171-6 ರನ್ ಗಳಿಸಿತು. ನಾಯಕ ವಿರಾಟ್ ಕೊಹ್ಲಿ 39 ಎಸೆತಗಳಲ್ಲಿ 48 ರನ್ ಬಾರಿಸಿದರು.
ಫಿಂಚ್ 20, ಶಿವಮ್ ದುಬೆ 23 ಹಾಗೂ ಕೊನೆಯಲ್ಲಿ ಕ್ರಿಸ್ ಮೋರಿಸ್ ಕೇವಲ 8 ಎಸೆತಗಳಲ್ಲಿ 25 ರನ್ ಸಿಡಿಸಿದರು.
ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಮುಹಮ್ಮದ್ ಶಮಿ ಹಾಗೂ ಮುರುಗನ್ ಅಶ್ವಿನ್ ತಲಾ 2 ವಿಕೆಟ್ ಪಡೆದರು.
Next Story