--

ಹಾರ್ದಿಕ್ ಪಾಂಡ್ಯ ಪಂದ್ಯಶ್ರೇಷ್ಠ

ಮೂರನೇ ಏಕದಿನ: ಆಸ್ಟ್ರೇಲಿಯ ವಿರುದ್ದ ಭಾರತಕ್ಕೆ ರೋಚಕ ಜಯ

ಸ್ಮಿತ್ ಸಹಿತ ಮೂವರು ಬ್ಯಾಟ್ಸ್ ಮನ್ ಗಳಿಗೆ ಪೆವಿಲಿಯನ್ ದಾರಿ ತೋರಿಸಿರುವ ಶಾರ್ದೂಲ್ ಠಾಕೂರ್.

ಕ್ಯಾನ್ ಬೆರಾ: ಆಸ್ಟ್ರೇಲಿಯ ವಿರುದ್ಧ ಬುಧವಾರ ಇಲ್ಲಿ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯವನ್ನು ಭಾರತ ತಂಡ 13 ರನ್ ಗಳ  ಅಂತರದಿಂದ ರೋಚಕವಾಗಿ ಗೆದ್ದುಕೊಂಡಿತು. ಈ ಮೂಲಕ ಸರಣಿಯಲ್ಲಿ ಕ್ಲೀನ್ ಸ್ವೀಪ್ ಮುಖಭಂಗದಿಂದ ಪಾರಾಯಿತು.

ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತವು ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ನಿಗದಿತ 50 ಓವರ್ ಗಳಲ್ಲಿ 5 ವಿಕೆಟ್ ಗಳ ನಷ್ಟಕ್ಕೆ 302 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಆಸ್ಟ್ರೇಲಿಯ ತಂಡ 49.3 ಓವರ್ ಗಳಲ್ಲಿ 289 ರನ್ ಗಳಿಸಿ ಆಲೌಟಾಯಿತು.

ಆಸ್ಟ್ರೇಲಿಯದ ಪರವಾಗಿ ನಾಯಕ ಆ್ಯರೊನ್ ಫಿಂಚ್(75, 82 ಎಸೆತ, 7 ಬೌಂಡರಿ, 3 ಸಿಕ್ಸರ್)ಸರ್ವಾಧಿಕ ಸ್ಕೋರ್ ಗಳಿಸಿದರು. ಆಲ್ ರೌಂಡರ್ ಮ್ಯಾಕ್ಸ್ ವೆಲ್ (59, 38 ಎಸೆತ, 3 ಬೌಂಡರಿ, 4 ಸಿಕ್ಸರ್) ಅರ್ಧಶತಕದ ಕೊಡುಗೆ ನೀಡಿದರು.  ಕಳೆದ 2 ಪಂದ್ಯಗಳಲ್ಲಿ ಸತತ ಶತಕ ಸಿಡಿಸಿದ್ದ ಸ್ಟೀವನ್ ಸ್ಮಿತ್ ಇಂದು ಕೇವಲ 7 ರನ್ ಗಳಿಸಿ ಶಾರ್ದೂಲ್ ಠಾಕೂರ್ ಗೆ ವಿಕೆಟ್ ಒಪ್ಪಿಸಿದರು.

ಭಾರತದ ಬೌಲಿಂಗ್ ವಿಭಾಗದಲ್ಲಿ ಶಾರ್ದೂಲ್ ಠಾಕೂರ್ (3-51) ಯಶಸ್ವಿ ಬೌಲರ್ ಎನಿಸಿಕೊಂಡರು. ಜಸ್ ಪ್ರೀತ್ ಬುಮ್ರಾ(2-43) ಹಾಗೂ ನಟರಾಜನ್ (2-70) ತಲಾ ಎರಡು ವಿಕೆಟ್ ಪಡೆದರು.

ಈಗಾಗಲೇ ಸರಣಿಯನ್ನು ಕಳೆದುಕೊಂಡಿರುವ ಭಾರತಕ್ಕೆ ಈ ಗೆಲುವು ಡಿಸೆಂಬರ್ 4ರಿಂದ ಆರಂಭವಾಗಲಿರುವ 3 ಪಂದ್ಯಗಳ ಟ್ವೆಂಟಿ-20 ಸರಣಿಗೆ ಆತ್ಮವಿಶ್ವಾಸವನ್ನು ಒದಗಿಸಿದೆ.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top