ಇಂಗ್ಲೆಂಡ್ ವಿರುದ್ಧ ಟ್ವೆಂಟಿ-20 ಸರಣಿ: ಭಾರತ ತಂಡ ಪ್ರಕಟ
ಸೂರ್ಯಕುಮಾರ್, ಕಿಶನ್,ರಾಹುಲ್ ಟೆವಾಟಿಯಾಗೆ ಅವಕಾಶ
ಹೊಸದಿಲ್ಲಿ,ಫೆ.20: ಇಂಗ್ಲೆಂಡ್ ವಿರುದ್ಧ ನಡೆಯಲಿರುವ 5 ಪಂದ್ಯಗಳ ಟ್ವೆಂಟಿ-20 ಸರಣಿಗೆ ಭಾರತವು ಶನಿವಾರ 19 ಆಟಗಾರರನ್ನು ಒಳಗೊಂಡ ತಂಡವನ್ನು ಆಯ್ಕೆ ಮಾಡಿದ್ದು, ಯುವ ವಿಕೆಟ್ಕೀಪರ್-ಬ್ಯಾಟ್ಸ್ಮನ್ ಇಶಾನ್ ಕಿಶನ್, ಸೂರ್ಯ ಕುಮಾರ್ ಯಾದವ್ ಹಾಗೂ ರಾಹುಲ್ ಟೆವಾಟಿಯಾಗೆ ಅವಕಾಶ ನೀಡಲಾಗಿದೆ.
ದೇಶೀಯ ಕ್ರಿಕೆಟ್ನಲ್ಲಿ ಮುಂಬೈ ಪರ ಹಾಗೂ ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ಪರ ಸ್ಥಿರ ಪ್ರದರ್ಶನ ನೀಡುತ್ತಿರುವ ಸೂರ್ಯಕುಮಾರ್ ಕೊನೆಗೂ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ದೇಶೀಯ ಕ್ರಿಕೆಟ್ನಲ್ಲಿ ಭರ್ಜರಿ ಫಾರ್ಮ್ನಲ್ಲಿರುವ ಕಿಶನ್ ಅವರು ರಿಷಭ್ ಪಂತ್ರೊಂದಿಗೆ 2ನೇ ವಿಕೆಟ್ಕೀಪರ್ ಆಗಿ ತಂಡಕ್ಕೆ ಸೇರಿದ್ದಾರೆ.
ಐಪಿಎಲ್ನಲ್ಲಿ ಸ್ಮರಣೀಯ ಪ್ರದರ್ಶನ ನೀಡಿದ್ದ ಟೆವಾಟಿಯಾ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.
ಟಿ-20 ಸರಣಿಯು ಅಹ್ಮದಾಬಾದ್ ನಲ್ಲಿ ಮಾರ್ಚ್ 12ರಿಂದ ಆರಂಭವಾಗಲಿದೆ.
ಭಾರತದ ಟಿ-20 ತಂಡ:ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ(ಉಪ ನಾಯಕ), ಕೆ.ಎಲ್.ರಾಹುಲ್, ಶಿಖರ್ ಧವನ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್(ವಿಕೆಟ್ಕೀಪರ್), ಇಶಾನ್ ಕಿಶನ್(ವಿಕೆಟ್ಕೀಪರ್),ಯಜುವೇಂದ್ರ ಚಹಾಲ್, ವರುಣ್ ಚಕ್ರವರ್ತಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರಾಹುಲ್ ಟೆವಾಟಿಯಾ, ಟಿ.ನಟರಾಜನ್, ಭುವನೇಶ್ವರ ಕುಮಾರ್, ದೀಪಕ್ ಚಹಾರ್, ನವದೀಪ್ ಸೈನಿ, ಶಾರ್ದೂಲ್ ಠಾಕೂರ್.