ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್: ಭಾರತಕ್ಕೆ ಆರಂಭಿಕ ಆಘಾತ; ನಾಲ್ಕು ವಿಕೆಟ್ ಪತನ
Photo: twitter.com/ICC
ಅಹಮದಾಬಾದ್: ಇಂಗ್ಲೆಂಡ್ ವಿರುದ್ಧ ಗುರುವಾರ ಇಲ್ಲಿ ಆರಂಭವಾಗಿರುವ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತ ಮೊದಲ ಇನ್ನಿಂಗ್ಸ್ ನಲ್ಲಿ ಆರಂಭಿಕ ಆಘಾತಕ್ಕೆ ಒಳಗಾಗಿದ್ದು, 80 ರನ್ ಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದೆ.
ಟಾಸ್ ಜಯಿಸಿ ಮೊದಲು ಬ್ಯಾಟಿಂಗ್ ಆಯ್ದುಕೊಂಡ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ ನಲ್ಲಿ 205 ರನ್ ಗಳಿಸಿ ಆಲೌಟಾಗಿತ್ತು. ಬಳಿಕ ಭಾರತವು ಮೊದಲ ದಿನದಾಟದಂತ್ಯಕ್ಕೆ 12 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 24 ರನ್ ಗಳಿಸಿತ್ತು. ಇಂದು ಮತ್ತೆ ಬ್ಯಾಟಿಂಗ್ ಆರಂಭಿಸಿದ ಭಾರತವು ಊಟದ ವಿರಾಮದ ವೇಳೆಗೆ ಮತ್ತೆ ಮೂರು ವಿಕೆಟ್ ಕಳೆದುಕೊಂಡಿದೆ.
ಚೇತೇಶ್ವರ ಪೂಜಾರ 15 ರನ್ ಗಳಿಸಿ ಲೀಚ್ ಗೆ ವಿಕೆಟ್ ಒಪ್ಪಿಸಿದರೆ, ನಾಯಕ ಕೊಹ್ಲಿ ಖಾತೆ ತೆರೆಯುವ ಮೊದಲೇ ಔಟಾದರು. ಅಜಿಂಕ್ಯ ರಹಾನೆ 27 ರನ್ ಗಳಿಸಿ ಆ್ಯಂಡರ್ಸನ್ ಗೆ ವಿಕೆಟ್ ಒಪ್ಪಿಸಿದರು. ರೋಹಿತ್ ಶರ್ಮಾ ಔಟಾಗದೆ 32 ರನ್ ಗಳಿಸಿ ಕ್ರೀಸಿನಲ್ಲಿದ್ದಾರೆ.
Next Story