ಚೆನ್ನೈ ತಂಡದ ನಾಯಕನಾಗಿ 200ನೇ ಪಂದ್ಯವನ್ನಾಡಿದ ಧೋನಿ
ಮುಂಬೈ: ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ನಾಯಕನಾಗಿ 200 ನೇ ಪಂದ್ಯವನ್ನಾಡಿದ ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಸೋಮವಾರ ಸಂಜೆ ತಮ್ಮ ಯಶಸ್ವಿ ಕಿರೀಟಕ್ಕೆ ಮತ್ತೊಂದು ಗರಿ ಸೇರಿಸಿದ್ದಾರೆ.
ಸೋಮವಾರ ವಾಂಖೆಡೆ ಸ್ಟೇಡಿಯಂನಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯದ ವಿರುದ್ಧ ಧೋನಿ ಈ ಸಾಧನೆ ಮಾಡಿದ್ದಾರೆ.
39 ವರ್ಷದ ಧೋನಿ ಚೆನ್ನೈ ತಂಡ ಮೂರು ಬಾರಿ ಐಪಿಎಲ್ ಪ್ರಶಸ್ತಿ ಗೆಲ್ಲಲು ತಂಡದ ನಾಯಕತ್ವವಹಿಸಿದ್ದರು. ಐಪಿಎಲ್ ನಲ್ಲಿ ಗರಿಷ್ಟ ರನ್ ಗಳಿಸಿದವರ ಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದ್ದಾರೆ.
Next Story