ಭಾರತದ ಮಹಿಳಾ ಕ್ರಿಕೆಟ್ ತಂಡಕ್ಕೆ ಶಿವ ಸುಂದರ್ ದಾಸ್ ಬ್ಯಾಟಿಂಗ್ ಕೋಚ್
photo :twitter.com
ಹೊಸದಿಲ್ಲಿ :ಭಾರತ ಮಹಿಳಾ ಕ್ರಿಕೆಟ್ ತಂಡದ ನೂತನ ಬ್ಯಾಟಿಂಗ್ ಕೋಚ್ ಆಗಿ ಟೀಮ್ ಇಂಡಿಯಾದ ಮಾಜಿ ಆರಂಭಿಕ ಬ್ಯಾಟ್ಸ್ಮನ್ ಶಿವ ಸುಂದರ್ ದಾಸ್ ಅವರನ್ನು ಬಿಸಿಸಿಐ ನೇಮಕ ಮಾಡಿದೆ.
2000-02ರ ನಡುವೆ 23 ಟೆಸ್ಟ್ ಪಂದ್ಯಗಳನ್ನು ಆಡಿದ ಶಿವ ಸುಂದರ್ ದಾಸ್, 2 ಶತಕ ಮತ್ತು 9 ಅರ್ಧಶತಕಗಳನ್ನು ಒಳಗೊಂಡಂತೆ 34.89 ಸರಾಸರಿಯಲ್ಲಿ 1,300 ರನ್ ಗಳಿಸಿದ್ದಾರೆ.
‘‘ನಾನು ಕಳೆದ 4-5 ವರ್ಷಗಳಿಂದ ಎನ್ಸಿಎಯ ಭಾಗವಾಗಿದ್ದೇನೆ ಮತ್ತು ಕಳೆದ ಎರಡು ವರ್ಷಗಳಿಂದ ಬ್ಯಾಟಿಂಗ್ ಕೋಚ್ ಆಗಿದ್ದೇನೆ. ನನಗೆ ಈ ಅವಕಾಶವನ್ನು ನೀಡಿದ ರಾಹುಲ್ ದ್ರಾವಿಡ್ ಮತ್ತು ಸೌರವ್ ಗಂಗುಲಿ ಅವರಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ ’’ಎಂದು ಬಿಸಿಸಿಐ ಅಧ್ಯಕ್ಷ ಗಂಗುಲಿ ನಾಯಕತ್ವದಲ್ಲಿ ತನ್ನ ಎಲ್ಲಾ ಅಂತರ್ರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳನ್ನು ಆಡಿರುವ ದಾಸ್ ಅಭಿಪ್ರಾಯಪಟ್ಟಿದ್ದಾರೆ.
Next Story