ಒಲಿಂಪಿಕ್ಸ್ ನಲ್ಲಿ ಕೊನೆಗೂ ಗೆಲುವಿನ ಮುಖ ಕಂಡ ಭಾರತದ ಮಹಿಳಾ ಹಾಕಿ ತಂಡ
photo: twitter/@IndiaSportsHub
ಟೋಕಿಯೊ: ಭಾರತದ ಮಹಿಳಾ ಹಾಕಿ ತಂಡ ಟೋಕಿಯೊ ಒಲಿಂಪಿಕ್ಸ್ ನಲ್ಲಿ ಕೊನೆಗೂ ಗೆಲುವಿನ ಮುಖ ಕಂಡಿದೆ. ಈ ಮೂಲಕ ಕ್ವಾರ್ಟರ್ ಫೈನಲ್ ಸುತ್ತಿಗೇರುವ ಕನಸು ಜೀವಂತವಾಗಿರಿಸಿಕೊಂಡಿದೆ.
ಶುಕ್ರವಾರ ನಡೆದ 'ಎ' ಗುಂಪಿನ ಪಂದ್ಯದಲ್ಲಿ ಭಾರತ ತಂಡವು ಐರ್ಲೆಂಡ್ ತಂಡವನ್ನು 1-0 ಗೋಲುಗಳ ಅಂತರದಿಂದ ಮಣಿಸಿತು.
ನವನೀತ್ ಕೌರ್ ಕೊನೆಯ ಕ್ಷಣದಲ್ಲಿ(57ನೇ ನಿಮಿಷ) ತಂಡದ ಪರ ಏಕೈಕ ಗೋಲು ಗಳಿಸಿ ರೋಚಕ ಗೆಲುವು ತಂದುಕೊಟ್ಟರು.
'ಎ' ಗುಂಪಿನಲ್ಲಿ ಸತತ 3 ಪಂದ್ಯಗಳಲ್ಲಿ ಸೋತಿದ್ದ ಭಾರತಕ್ಕೆ ಈ ಪಂದ್ಯದಲ್ಲಿ ಗೆಲ್ಲುವುದು ಅನಿವಾರ್ಯವಾಗಿತ್ತು.
Next Story