ಒಲಿಂಪಿಕ್ಸ್: ಪಿ.ವಿ. ಸಿಂಧು ಸೆಮಿ ಫೈನಲ್ ಗೆ ಲಗ್ಗೆ
ಟೋಕಿಯೊ: ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಟೋಕಿಯೊ ಒಲಿಂಪಿಕ್ಸ್ ನಲ್ಲಿ ಸೆಮಿ ಫೈನಲ್ ಸುತ್ತಿಗೆ ಲಗ್ಗೆ ಇಟ್ಟರು.
ಶುಕ್ರವಾರ 56 ನಿಮಿಷಗಳ ಕಾಲ ನಡೆದ ಮಹಿಳೆಯರ ಸಿಂಗಲ್ಸ್ ನ ಕ್ವಾರ್ಟರ್ ಫೈನಲ್ ನಲ್ಲಿ ಹೈದರಾಬಾದ್ ಆಟಗಾರ್ತಿ ಸಿಂಧು ಅವರು ಜಪಾನ್ ನ 4ನೇ ಶ್ರೇಯಾಂಕದ ಆಟಗಾರ್ತಿ ಅಕಾನೆ ಯಮಗುಚಿಯವರನ್ನು 21-13 ಹಾಗೂ 22-20 ನೇರ ಗೇಮ್ ಗಳ ಅಂತರದಿಂದ ರೋಚಕವಾಗಿ ಮಣಿಸಿದರು.
Next Story