ಟ್ವೆಂಟಿ-20: ಬಾಂಗ್ಲಾದೇಶಕ್ಕೆ ಆಸ್ಟ್ರೇಲಿಯ ವಿರುದ್ಧ ಐತಿಹಾಸಿಕ ಸರಣಿ ಗೆಲುವು
photo : twitter/@ICC
ಢಾಕಾ: ಕನಿಷ್ಠ ಸ್ಕೋರ್ ಗಳ ಮೂರನೇ ಟ್ವೆಂಟಿ-20 ಪಂದ್ಯದಲ್ಲಿ ಆತಿಥೇಯ ಬಾಂಗ್ಲಾದೇಶ ತಂಡ ಆಸ್ಟ್ರೇಲಿಯ ತಂಡದ ವಿರುದ್ಧ 10 ರನ್ ಗಳ ರೋಚಕ ಜಯ ದಾಖಲಿಸಿದೆ. ಈ ಮೂಲಕ 5 ಪಂದ್ಯಗಳ ಸರಣಿಯಲ್ಲಿ 3-0 ಮುನ್ನಡೆ ಪಡೆದು ಸರಣಿ ವಶಪಡಿಸಿಕೊಂಡಿದೆ.
ಬಾಂಗ್ಲಾದೇಶವು ಎಲ್ಲ 3 ಮಾದರಿಯ ಕ್ರಿಕೆಟ್ ನಲ್ಲಿ ಇದೇ ಮೊದಲ ಬಾರಿ ಆಸ್ಟ್ರೇಲಿಯ ವಿರುದ್ಧ ಸರಣಿ ಗೆದ್ದುಕೊಂಡು ಇತಿಹಾಸ ರಚಿಸಿದೆ.
ಶುಕ್ರವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ 9 ವಿಕೆಟ್ ನಷ್ಟಕ್ಕೆ ಕೇವಲ 127 ರನ್ ಗಳಿಸಿತ್ತು. ಗೆಲ್ಲಲು 128 ರನ್ ಸುಲಭ ಗುರಿ ಬೆನ್ನಟ್ಟಿದ್ದ ಆಸ್ಟ್ರೇಲಿಯ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 117 ರನ್ ಗಳಿಸಿ ಸೋಲೊಪ್ಪಿಕೊಂಡಿತು.
ಶರೀಫುಲ್ ಇಸ್ಲಾಂ(2-29) ಯಶಸ್ವಿ ಬೌಲರ್ ಎನಿಸಿಕೊಂಡರು. ಅಹ್ಮದ್ ಹಾಗೂ ಶಕೀಬ್ ಅಲ್ ಹಸನ್ ತಲಾ ಒಂದು ವಿಕೆಟ್ ಪಡೆದು ಆಸ್ಟ್ರೇಲಿಯವನ್ನು ಕಡಿಮೆ ಮೊತ್ತಕ್ಕೆ ಕಟ್ಟಿ ಹಾಕಿ ತಂಡಕ್ಕೆ ಅಸಾಧ್ಯದ ಗೆಲುವು ತಂದುಕೊಟ್ಟರು.
Next Story