ಟಿ-20 ವಿಶ್ವಕಪ್ ನಿಂದ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಹೊರಕ್ಕೆ
ಹೊಸದಿಲ್ಲಿ: ಮುಂಬರುವ ಟಿ-ಟ್ವೆಂಟಿ ವಿಶ್ವಕಪ್ ಕ್ರಿಕೆಟ್ ಸರಣಿಯಿಂದ ಭಾರತ ಕ್ರಿಕೆಟ್ ತಂಡದ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಹೊರಗುಳಿಯಲಿದ್ದಾರೆ ಎಂದು ತಿಳಿದು ಬಂದಿದೆ. ಗಾಯದ ಸಮಸ್ಯೆಯಿಂದಾಗಿ ಅವರು ಟೂರ್ನಿಯಿಂದ ಹೊರಗುಳಿಯಲಿದ್ದಾರೆ ಎಂದು ಬಿಸಿಸಿಐಯನ್ನು ಉಲ್ಲೇಖಿಸಿ PTI ವರದಿ ಮಾಡಿದೆ.
ಇದು ವಿಶ್ವಕಪ್ ತಯಾರಿಯಲ್ಲಿದ್ದ ಭಾರತ ತಂಡಕ್ಕೆ ಭಾರೀ ಹಿನ್ನಡೆಯಾಗಿದೆ. ಈ ಕುರಿತು ಬಿಸಿಸಿಐನಿಂದ ಅಧಿಕೃತ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
Next Story