ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿ: ಗಾಯಾಳು ಬುಮ್ರಾ ಬದಲಿಗೆ ಮುಹಮ್ಮದ್ ಸಿರಾಜ್ ಗೆ ಸ್ಥಾನ
ಮುಹಮ್ಮದ್ ಸಿರಾಜ್ (PTI)
ಹೊಸದಿಲ್ಲಿ: ಗಾಯದ ಸಮಸ್ಯೆಯಿಂದ ದಕ್ಷಿಣ ಆಫ್ರಿಕಾ ವಿರುದ್ಧದ T20I ಸರಣಿಯಿಂದ ಹೊರಗುಳಿದ ಭಾರತದ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ (Jasprit Bumrah) ಅವರ ಬದಲಿಗೆ ಮುಹಮ್ಮದ್ ಸಿರಾಜ್ (Mohammed Siraj) ಅವರನ್ನು ಆಯ್ಕೆ ಮಾಡಲಾಗಿದೆ. ಈ ಕುರಿತು ಬಿಸಿಸಿಐ ಅಧಿಕೃತ ಘೋಷಣೆ ಮಾಡಿದೆ.
"ಬುಮ್ರಾ ಬೆನ್ನುನೋವಿಗೆ ಒಳಗಾಗಿದ್ದು, ಪ್ರಸ್ತುತ ಬಿಸಿಸಿಐ ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿದ್ದಾರೆ" ಎಂದು ಭಾರತೀಯ ಕ್ರಿಕೆಟ್ ಮಂಡಳಿ ಅಧಿಕೃತ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿಯಲ್ಲಿ ಭಾರತ 1-0 ಅಂತರದಿಂದ ಮುನ್ನಡೆ ಕಾಯ್ದುಕೊಂಡಿದೆ.
ವೇಗಿ ಜಸ್ಪ್ರೀತ್ ಬುಮ್ರಾ ಅವರು ಗಾಯದ ಸಮಸ್ಯೆಯಿಂದ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಯಿಂದ ಹೊರಗುಳಿಯಲಿದ್ದಾರೆ ಎಂದೂ ಬಿಸಿಸಿಐ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
Next Story