ಟ್ವೆಂಟಿ-20 ವಿಶ್ವಕಪ್ ಫೈನಲ್: ಟಾಸ್ ಜಯಿಸಿದ ಇಂಗ್ಲೆಂಡ್ ಫೀಲ್ಡಿಂಗ್ ಆಯ್ಕೆ
ಮೆಲ್ಬೋರ್ನ್: ಟ್ವೆಂಟಿ-20 ವಿಶ್ವಕಪ್ ಫೈನಲ್ ನಲ್ಲಿ ಟಾಸ್ ಜಯಿಸಿದ ಇಂಗ್ಲೆಂಡ್ ಕ್ರಿಕೆಟ್ ತಂಡದ ನಾಯಕ ಜೋಸ್ ಬಟ್ಲರ್ ಎದುರಾಳಿ ಪಾಕಿಸ್ತಾನವನ್ನು ಬ್ಯಾಟಿಂಗ್ ಗೆ ಇಳಿಸಿದರು.
ಫೈನಲ್ ಪಂದ್ಯಕ್ಕೆ ಮುಂಚಿತವಾಗಿ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಮೋಡ ಕವಿದ ವಾತಾವರಣವಿದೆ. ಫ್ಲಡ್ ಲೈಟ್ ಗಳನ್ನು ಈಗಾಗಲೇ ಆನ್ ಮಾಡಲಾಗಿದೆ. ಇಂದು ಪದೇ ಪದೇ ಮಳೆ ಬೀಳಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಫೈನಲ್ ಪಂದ್ಯದ ಮೇಲೆ ಮಳೆಯ ಭೀತಿ ಹೆಚ್ಚಾಗಿದೆ.
ಪಾಕಿಸ್ತಾನ ಹಾಗೂ ಇಂಗ್ಲೆಂಡ್ ಎರಡನೇ ಬಾರಿಗೆ ಟಿ20 ವಿಶ್ವಕಪ್ ಗೆಲ್ಲುವ ನಿರೀಕ್ಷೆಯಲ್ಲಿವೆ
ರವಿವಾರ ಕನಿಷ್ಠ ಮಟ್ಟದ ಆಟ ಸಾಧ್ಯವಾಗದಿದ್ದರೆ, ಸೋಮವಾರ ಮೀಸಲು ದಿನವನ್ನು ಬಳಸಲಾಗುತ್ತದೆ.
Next Story