ಮೊದಲ ಟೆಸ್ಟ್: ಬಾಂಗ್ಲಾದೇಶ ವಿರುದ್ದ ಭಾರತಕ್ಕೆ ಭರ್ಜರಿ ಜಯ, ಸರಣಿ ಮುನ್ನಡೆ
ಢಾಕಾ, ಡಿ.18: ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಭಾರತವು 188 ರನ್ ಗಳ ಅಂತರದಿಂದ ಗೆದ್ದುಕೊಂಡಿದೆ. 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ಐದನೇ ಹಾಗೂ ಕೊನೆಯ ದಿನವಾದ ರವಿವಾರ ಬಾಂಗ್ಲಾದೇಶವನ್ನು 2ನೇ ಇನಿಂಗ್ಸ್ ನಲ್ಲಿ 324 ರನ್ ಗೆ ನಿಯಂತ್ರಿಸಿದ ಭಾರತ ಭರ್ಜರಿ ಜಯ ದಾಖಲಿಸಿದೆ.
ಗೆಲ್ಲಲು 513 ರನ್ ಕಠಿಣ ಗುರಿ ಬೆನ್ನಟ್ಟಿದ ಬಾಂಗ್ಲಾದೇಶ 6 ವಿಕೆಟ್ ಗಳ ನಷ್ಟಕ್ಕೆ 272 ರನ್ ನಿಂದ ಬ್ಯಾಟಿಂಗ್ ಮುಂದುವರಿಸಿತು. 40 ರನ್ ನಿಂದ ಬ್ಯಾಟಿಂಗ್ ಮುಂದುವರಿಸಿದ ಆಲ್ ರೌಂಡರ್ ಶಾಕಿಬ್ ಅಲ್ ಹಸನ್ 84 ರನ್ ಗಳಿಸಿ ಒಂದಷ್ಟು ಪ್ರತಿರೋಧ ಒಡ್ಡಿದರು. ಹಸನ್ ಔಟಾಗುವ ಮೂಲಕ ಬಾಂಗ್ಲಾದೇಶದ ಹೋರಾಟ ಅಂತ್ಯವಾಯಿತು.
ಭಾರತದ ಪರ ಸ್ಪಿನ್ನರ್ ಗಳಾದ ಅಕ್ಷರ್ ಪಟೇಲ್(4-77) ಹಾಗೂ ಕುಲದೀಪ್ ಯಾದವ್(3-73) 7 ವಿಕೆಟ್ ಗಳನ್ನು ಹಂಚಿಕೊಂಡರು.
Next Story