Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿಗೆ...

ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿಗೆ ಆಯ್ಕೆಯಾಗದ ಸರ್ಫ್ರಾಝ್ ಖಾನ್: ಸಾಮಾಜಿಕ ತಾಣದಲ್ಲಿ ನೋವು ತೋಡಿಕೊಂಡ ಯುವ ಆಟಗಾರ

15 Jan 2023 11:33 AM IST
share
ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿಗೆ ಆಯ್ಕೆಯಾಗದ ಸರ್ಫ್ರಾಝ್ ಖಾನ್: ಸಾಮಾಜಿಕ ತಾಣದಲ್ಲಿ ನೋವು ತೋಡಿಕೊಂಡ ಯುವ ಆಟಗಾರ

ಹೊಸದಿಲ್ಲಿ: ಭಾರತ-ಆಸ್ಟ್ರೇಲಿಯಾ ತಂಡಗಳ ನಡುವಿನ ಮೊದಲ ಎರಡು ಟೆಸ್ಟ್ ಪಂದ್ಯಗಳ ಗಾವಸ್ಕರ್-ಬಾರ್ಡರ್ ಟ್ರೋಫಿ ಸರಣಿಗೆ ಭಾರತ ತಂಡದ ಆಟಗಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ. ಆದರೆ, ಈ ಪಟ್ಟಿಯಲ್ಲಿ ಮತ್ತೊಮ್ಮೆ ಅವಕಾಶ ವಂಚಿತರಾಗಿರುವ 25 ವರ್ಷದ ಯುವ ಪ್ರತಿಭಾನ್ವಿತ ಬ್ಯಾಟರ್ ಸರ್ಫ್ರಾಝ್ ಖಾನ್, 'ಡಾನ್ ಬ್ರಾಡ್ಮನ್' ಅವರನ್ನು ಉಲ್ಲೇಖಿಸಿ ಇನ್ಸ್ಟಾಗ್ರಾಮ್‌ನಲ್ಲಿ ನಿಗೂಢ ಪೋಸ್ಟ್ ಒಂದನ್ನು ಮಾಡಿದ್ದು, ಇದನ್ನು ಬಿಸಿಸಿಐ ಆಯ್ಕೆದಾರರಿಗೆ ನೀಡಿರುವ ತೀಕ್ಷ್ಣ ಪ್ರತಿಕ್ರಿಯೆ ಎಂದೇ ಕ್ರಿಕೆಟ್ ವಲಯದಲ್ಲಿ ವ್ಯಾಖ್ಯಾನಿಸಲಾಗುತ್ತಿದೆ ಎಂದು hindustantimes.com ವರದಿ ಮಾಡಿದೆ.

ಕಳೆದ ಮೂರು ದೇಶೀಯ ಋತುವಿನಲ್ಲಿ ರನ್‌ಗಳ ಸೂರೆ ಮಾಡಿರುವ ಸರ್ಫ್ರಾಝ್ ಖಾನ್‌ ಹೆಸರನ್ನು ಭಾರತ-ಆಸ್ಟ್ರೇಲಿಯಾ ನಡುವಿನ ಸರಣಿಗೂ ತಂಡದ ಆಯ್ಕೆದಾರರು ಕೈಬಿಟ್ಟಿರುವುದು ಕ್ರಿಕೆಟ್ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಈ ಪ್ರತಿಭಾವಂತ ಯುವ ಆಟಗಾರನಿಗೆ ಭಾರತ ತಂಡದ ಆಯ್ಕೆಯಲ್ಲಿ ಪದೇ ಪದೇ ಅವಕಾಶ ನಿರಾಕರಿಸಲಾಗುತ್ತಿದ್ದು, ಇದು ಕ್ರಿಕೆಟ್ ಪಂಡಿತರು ಹಾಗೂ ಅಭಿಮಾನಿಗಳ ಆಕ್ರೋಶ ಮತ್ತು ಜಿಜ್ಞಾಸೆಗೆ ಕಾರಣವಾಗಿದೆ. ಇದೇ ಪ್ರಶ್ನೆಯನ್ನು ತಂಡದ ಆಯ್ಕೆದಾರರ ಮುಂದಿರಿಸಿರುವ ಸರ್ಫ್ರಾಝ್ ಖಾನ್, ನಾನು ಇದಕ್ಕಿಂತ ಹೆಚ್ಚು ಮತ್ತೇನು ಮಾಡಬೇಕಿದೆ ಎಂದು ನೋವಿನಿಂದ ಪ್ರಶ್ನಿಸಿದ್ದಾರೆ.

ಈ ಕುರಿತು ಶನಿವಾರ ಇನ್ಸ್ಟಾಗ್ರಾಮ್‌ನಲ್ಲಿ ತಮ್ಮ ಮೊದಲ ಪೋಸ್ಟ್ ಮಾಡಿರುವ ಸರ್ಫ್ರಾಜ್ ಖಾನ್, ಮುಂಬೈ ತಂಡದ ಪರವಾಗಿ ತಾವು ಆಡಿರುವ 30 ಇನಿಂಗ್ಸ್‌ಗಳಲ್ಲಿ 110.73ರ ಸರಾಸರಿಯೊಂದಿಗೆ ಒಟ್ಟು 2436 ರನ್ ಪೇರಿಸಿದ್ದೇನೆ ಎಂದು ಬರೆದುಕೊಂಡಿದ್ದಾರೆ. 

ಎರಡನೆಯ ಪೋಸ್ಟ್‌ನಲ್ಲಿ, ನನ್ನ ಪ್ರಥಮ ದರ್ಜೆ ಕ್ರಿಕೆಟ್ ಪಂದ್ಯಗಳಲ್ಲಿನ ಸರಾಸರಿ ರನ್ ಗಳಿಕೆ 80.47 ಇದ್ದು,  ಇಡೀ ವಿಶ್ವದಲ್ಲಿ ಐವತ್ತು ಇನಿಂಗ್ಸ್‌ಗಳ ಪೈಕಿ ಅತಿ ಹೆಚ್ಚು ಸರಾಸರಿ ರನ್ ಗಳಿಕೆ ಹೊಂದಿರುವ ಎರಡನೆ ಬ್ಯಾಟರ್‌ ಆಗಿದ್ದೇನೆ. ಮೊದಲ ಕ್ರಮಾಂಕದಲ್ಲಿ ಡಾನ್ ಬ್ರಾಡ್ಮನ್ ಇದ್ದಾರೆ ಎಂದು ಬರೆದುಕೊಂಡಿದ್ದಾರೆ. ಈ ನಿಗೂಢ ಪೋಸ್ಟ್ ಮೂಲಕ ತಂಡದ ಆಯ್ಕೆದಾರರು ತನ್ನನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸುತ್ತಿದ್ದಾರೆ ಎಂದು ಅವರು ಸೂಚ್ಯವಾಗಿ ಹೇಳಿದ್ದಾರೆ.

2019-20ರ ರಣಜಿ ಋತುವಿನಲ್ಲಿ ಸರ್ಫ್ರಾಝ್ ಖಾನ್, ತಾವು ಆಡಿದ ಆರು ಪಂದ್ಯಗಳ ಪೈಕಿ ಮೂರು ಶತಕ ಮತ್ತು ಎರಡು ಅರ್ಧ ಶತಕ ಸಿಡಿಸಿ, 154.66 ರನ್ ಸರಾಸರಿಯೊಂದಿಗೆ ಒಟ್ಟು 928 ರನ್ ಗಳಿಸಿದ್ದರು. 2021-22ರಲ್ಲಿ ತಮ್ಮ ಸ್ಫೋಟಕ ಫಾರ್ಮ್ ಮುಂದುವರಿಸಿದ್ದ ಅವರು, ನಾಲ್ಕು ಶತಕ, ಎರಡು ಅರ್ಧ ಶತಕ ಗಳಿಸಿ, 122.75 ರನ್ ಸರಾಸರಿಯೊಂದಿಗೆ ಒಟ್ಟು 982 ರನ್ ಗಳಿಸಿದ್ದರು. ಈ ಋತುವಿನಲ್ಲೂ ತಮ್ಮ ಅತ್ಯುತ್ತಮ ಫಾರ್ಮ್ ಮುಂದುವರಿಸಿರುವ ಸರ್ಫ್ರಾಝ್, ಇಲ್ಲಿಯವರೆಗೆ ಎರಡು ಶತಕ, ಒಂದು ಅರ್ಧ ಶತಕ ಗಳಿಸಿ, 107.75 ರನ್ ಸರಾಸರಿಯೊಂದಿಗೆ ಒಟ್ಟು 431 ರನ್ ಗಳಿಸಿದ್ದಾರೆ. ಹೀಗಿದ್ದೂ ಕಳೆದ ಮೂರು ವರ್ಷದಿಂದ ಅವರಿಗೆ ಅವಕಾಶ ನಿರಾಕರಿಸುತ್ತಿರುವ ಕುರಿತು ಕ್ರಿಕೆಟ್ ಪಂಡಿತರು ವಿಸ್ಮಯಗೊಂಡಿದ್ದಾರೆ.

share
Next Story
X