ಇಮಾಮ್/ಮುಅದ್ಸಿನ್ರಿಗೆ ನಿವೃತ್ತಿ ವೇತನ: ಅರ್ಜಿ ಆಹ್ವಾನ
ಮಂಗಳೂರು, ಜು.6: ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಲ್ಲಿ ನೋಂದಣಿಗೊಂಡ ದ.ಕ. ಜಿಲ್ಲೆಯ ಮಸೀದಿಗಳಲ್ಲಿ 10 ವರ್ಷಕ್ಕಿಂತ ಮೇಲ್ಫಟ್ಟು ಸೇವೆಗೈದು ಕೆಲಸದಿಂದ ನಿವೃತ್ತಿ ಹೊಂದಿ 65 ವರ್ಷ ಪೂರ್ತಿಗೊಳಿಸಿದ ಇಮಾಮ್ರಿಗೆ ಮಾಸಿಕ 2,000 ರೂ. ಮತ್ತು ಮುಅದ್ಸಿನ್ಗೆ ಮಾಸಿಕ 1,500 ರೂ. ನಿವೃತ್ತಿ ವೇತನ ನೀಡಲಾಗುವುದು.
ಈ ಅರ್ಹತೆಯುಳ್ಳ ಇಮಾಮ್/ಮುಅದ್ಸಿನ್ರು ಅರ್ಜಿ ನಮೂನೆಯನ್ನು ಜಿಲ್ಲಾ ವಕ್ಫ್ ಕಚೇರಿಯಿಂದ ಪಡೆದುಕೊಂಡು ಆಧಾರ್ ಕಾರ್ಡ್ ನಕಲು ಪ್ರತಿ, ಅರ್ಜಿದಾರರ ಸೇವಾ ದೃಢೀಕರಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಆದಾಯ ದೃಢೀಕರಣ ಪತ್ರ ಅಥವಾ ಬಿಪಿಎಲ್ ಕಾರ್ಡ್ ಪ್ರತಿ, ವಿದ್ಯಾಭ್ಯಾಸದ ಬಗ್ಗೆ ದೃಢೀಕರಣ ಪತ್ರ (ಧಾರ್ಮಿಕ ಮತ್ತು ಲೌಕಿಕ) ಇತ್ಯಾದಿ ದಾಖಲೆಗಳೊಂದಿಗೆ ದ್ವಿಪ್ರತಿಯಲ್ಲಿ ಜಿಲ್ಲಾ ವಕ್ಫ್ ಕಚೇರಿ, ಅಲ್ಫಸಂಖ್ಯಾತರ ಕಲ್ಯಾಣ ಭವನದ 2ನೇ ಮಹಡಿ, ಓಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ, ಮಂಗಳೂರು (ಮಾಹಿತಿಗಾಗಿ ಜಿಲ್ಲಾ ವಕ್ಫ್ ಕಚೇರಿಯ ದೂ.ಸಂ: 0824-2420078ನ್ನು ಸಂಪರ್ಕಿಸಬಹುದು) ಇಲ್ಲಿಗೆ ಸಲ್ಲಿಸಬೇಕು ಎಂದು ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಹಾಜಿ ಯು.ಕೆ. ಮೋನು ಕನಚೂರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.