ಉಡುಪಿ: ಕ್ರೀಡಾ ಇಲಾಖೆ ಪ್ರಶಸ್ತಿಗೆ ಆನ್ಲೈನ್ ಅರ್ಜಿ ಸಲ್ಲಿಸಿ
ಉಡುಪಿ, ಜು.10: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವಿವಿಧ ಸೇವೆಗಳಿಗಾಗಿ ಸೇವಾ ಸಿಂಧು ವೆಬ್ಸೈಟ್ನಲ್ಲಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸ್ವೀಕರಿಸಲಾಗುವುದು.
ಯುವಕ/ಯುವತಿ/ಸಂಘ/ಕ್ಲಬ್ಗಳ ನೊಂದಣಿಗೆ ಅರ್ಜಿ, ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ, ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿ, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಗಾಗಿ ಸೇವಾ ಸಿಂಧು ವೆಬ್ಸೈಟ್ -https://sevasindhu.karnataka.gov.in-ನಲ್ಲಿ ಅರ್ಜಿಗಳನ್ನು ಸಲ್ಲಿಸು ವಂತೆ ಸೂಚಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಡಾ.ರೋಶನ್ಕುಮಾರ್ ಶೆಟ್ಟಿ, ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಜಿಲ್ಲೆ (0820-2521324, 94808-86467) ಇವರನ್ನು ಸಂಪರ್ಕಿಸಲು ಕೋರಿದೆ.
Next Story