ಗುಜರಾತ್ , ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಸರಳ ಬಹುಮತ
ಗುಜರಾತ್ ನಲ್ಲಿ ಆಡಳಿತಾರೂಢ ಬಿಜೆಪಿಗೆ ಪೈಪೋಟಿ ನೀಡಿದ ಕಾಂಗ್ರೆಸ್
ಹೊಸದಿಲ್ಲಿ, ಡಿ.18: ತೀವ್ರ ಕುತೂಹಲ ಕೆರಳಿಸಿದ್ದ ಗುಜರಾತ್ ಮತ್ತು ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯ ಪ್ರಕಟಗೊಂಡ ಫಲಿತಾಂಶಗಳ ಪೈಕಿ ಉಭಯ ರಾಜ್ಯಗಳಲ್ಲೂ ಬಿಜೆಪಿ ಸರಳ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯುವತ್ತ ಹೆಜ್ಜೆ ಇರಿಸಿದೆ.
ಗುಜರಾತ್ ನಲ್ಲಿ ಬಿಜೆಪಿ 99 ಕ್ಷೇತ್ರಗಳಲ್ಲಿ ಜಯ ಗಳಿಸಿದೆ. ಹಿಮಾಚಲ ಪ್ರದೇಶದಲ್ಲಿ ಬಿಜೆಪಿ 41 ಕ್ಷೇತ್ರಗಳಲ್ಲಿ ಜಯ ಗಳಿಸಿದ್ದು, 3 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.
ಗುಜರಾತ್ ನಲ್ಲಿ ಬಿಜೆಪಿಗೆ ತೀವ್ರ ಪೈಪೋಟಿ ನೀಡಿರುವ ಕಾಂಗ್ರೆಸ್ 80 ಕ್ಷೇತ್ರಗಳಲ್ಲಿ ಜಯಿಸಿದೆ. ಸ್ಥಾನಗಳ ಗಳಿಕೆಯಲ್ಲಿ ಗುಜರಾತ್ ನಲ್ಲಿ ಕಾಂಗ್ರೆಸ್ ಹಿಂದಿನ ಚುನಾವಣೆಗಿಂತ ಈ ಬಾರಿ ಪ್ರಗತಿ ಸಾಧಿಸಿದೆ. ಆದರೆ ಹಿಮಾಚಲ ಪ್ರದೇಶದಲ್ಲಿ ಹಿನ್ನಡೆ ಅನುಭವಿಸಿದೆ.
Next Story