200 ಅಡಿ ಆಳದ ಕೊಳವೆ ಬಾವಿಗೆ ಬಿದ್ದ 6 ವರ್ಷದ ಬಾಲಕ
ಪುಣೆ, ಫೆ.20: ಸುಮಾರು 200 ಅಡಿ ಆಳದ ಕೊಳವೆಬಾವಿಯೊಂದಕ್ಕೆ 6 ವರ್ಷದ ಬಾಲಕ ಬಿದ್ದಿರುವ ಘಟನೆ ಪುಣೆಯಲ್ಲಿ ನಡೆದಿದ್ದು, ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ. ಅಂಬೆಗಾವ್ ತಾಲೂಕಿನ ತೊರಂದಾಳೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.
10ರಿಂದ 12 ಅಡಿ ಆಳದಲ್ಲಿ ಬಾಲಕ ಸಿಲುಕಿಕೊಂಡಿದ್ದಾನೆ ಎಂದು ರಕ್ಷಣಾ ತಂಡದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹೊರಗಿರುವವರ ಮಾತಿಗೆ ಬಾಲಕನು ಪ್ರತಿಕ್ರಿಯಿಸುತ್ತಿದ್ದಾನೆ. ರಾಷ್ಟ್ರೀಯ ವಿಪತ್ತು ನಿರ್ವಹಣ ತಂಡದ ಸದಸ್ಯರು ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ.
ಕೊಳವೆ ಬಾವಿಗೆ ಬಿದ್ದ ಬಾಲಕನನ್ನು ರವಿ ಪಂಡಿತ್ ಎಂದು ಗುರುತಿಸಲಾಗಿದೆ.
Next Story