ಜಮ್ಮುವಿನ ಟ್ರಾಲ್ ಪಟ್ಟಣದಲ್ಲಿ ಉಗ್ರರೊಂದಿಗೆ ಗುಂಡಿನ ಚಕಮಕಿ
ಶ್ರೀನಗರ, ಮಾ.5: ಜಮ್ಮು ಮತ್ತು ಕಾಶ್ಮೀರದ ಟ್ರಾಲ್ ಪಟ್ಟಣದಲ್ಲಿ ಭದ್ರತಾ ಪಡೆ ಮತ್ತು ಉಗ್ರರೊಂದಿಗೆ ಗುಂಡಿನ ಕಾಳಗ ಮಂಗಳವಾರ ಬೆಳಗ್ಗೆಯೂ ಮುಂದುವರಿದಿದೆ.
ಉಗ್ರರು ಅಡಗಿಕೊಂಡಿರುವ ಖಚಿತ ವರ್ತಮಾನದ ಮೇರೆಗೆ ಮಿರ್ ಮೊಹಾಲ್ಲದಲ್ಲಿ ಸೋಮವಾರ ಸಂಜೆ ಭದ್ರತಾ ಪಡೆಗಳು ಶೋಧ ಆರಂಭಿಸಿತ್ತು. ಕಾರ್ಯಾಚರಣೆ ಮಂಗಳವಾರವೂ ಮುಂದುವರಿದಿದ್ದು, ಉಗ್ರರೊಂದಿಗೆ ಗುಂಡಿನ ಕಾಳಗ ನಡೆಯುತ್ತಿದೆ.
ಫೆ.14ರಂದು ಪುಲ್ವಾಮದಲ್ಲಿ ಸಿಆರ್ ಪಿಎಫ್ ವಾಹನದ ಮೇಲೆ ಉಗ್ರರ ಆತ್ಮಾಹುತಿ ದಾಳಿ ನಡೆದು 40 ಸಿಆರ್ ಪಿಎಫ್ ಜವಾನರು ಹುತಾತ್ಮರಾದ ಬಳಿಕ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ವಿವಿಧ ಭಾಗಗಳಲ್ಲಿ ಹಲವು ಎನ್ ಕೌಂಟರ್ ಗಳು ನಡೆದಿವೆ. ಉಗ್ರರ ವಿರುದ್ಧ ಕಾರ್ಯಾಚರಣೆಯ ಹಿನ್ನೆಲೆಯಲ್ಲಿ ಟ್ರಾಲ್ ಪಟ್ಟಣದಲ್ಲಿ ಮೊಬೈಲ್ ಮತ್ತು ಇಂಟರ್ ನೆಟ್ ಸಂಪರ್ಕ ವನ್ನು ಕಡಿತಗೊಳಿಸಲಾಗಿದೆ.
Next Story