ಜಮ್ಮು-ಕಾಶ್ಮೀರ: ಕಂದಕಕ್ಕೆ ಉರುಳಿ ಬಿದ್ದ ಬಸ್; 35 ಮಂದಿ ಮೃತ್ಯು
ಜಮ್ಮು, ಜು.1: ಗುಡ್ಡಗಾಡು ರಸ್ತೆಯಲ್ಲಿ ಮಿನಿ ಬಸ್ವೊಂದು ಆಳವಾದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 35 ಪ್ರಯಾಣಿಕರು ಮೃತಪಟ್ಟಿರುವ ಘಟನೆ ಜಮ್ಮು-ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಸ್ ಕೆಶ್ವಾನ್ನಿಂದ ಕಿಶ್ತ್ವಾರ್ಗೆ ತೆರಳುತ್ತಿದ್ದ ಮಾರ್ಗ ಮಧ್ಯೆ ಸಿರ್ಗ್ವಾರಿ ಎಂಬಲ್ಲಿ ಬೆಳಗ್ಗೆ 7:30ರ ಸುಮಾರಿಗೆ ಸ್ಕಿಡ್ ಆಗಿ ಕಮರಿಗೆ ಉರುಳಿ ಬಿದ್ದಿದೆ.
ಈ ತನಕ 20 ಜನರ ಮೃತದೇಹಗಳನ್ನು ಹೊರ ತೆಗೆಯಲಾಗಿದೆ ಎಂದು ಜಮ್ಮು ಐಜಿಪಿ ಎಂಕೆ ಸಿನ್ಹಾ ಪಿಟಿಐಗೆ ತಿಳಿಸಿದ್ದಾರೆ.
ಘಟನೆಯಲ್ಲಿ 24 ಮಂದಿ ಮೃತಪಟ್ಟಿದ್ದಾರೆ ಎಂದು ಈ ಹಿಂದೆ ಪೊಲೀಸ್ ಅಧಿಕಾರಿಗಳು ಹೇಳಿದ್ದರು. ಇದೀಗ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
Next Story