ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಶಿಕ್ಷಕ
ಭುವನೇಶ್ವರ, ಜು.18: ಒಡಿಶಾದ ಸಂಬಾಲ್ಪುರ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೇಲೆ ಶಿಕ್ಷಕ ಅತ್ಯಾಚಾರ ಎಸಗಿದ್ದಾನೆ. ಸಂತ್ರಸ್ತೆ ವಿದ್ಯಾರ್ಥಿನಿ ಈ ಬಗ್ಗೆ ಕುಚಿಂಡಾ ಠಾಣೆಯಲ್ಲಿ ದೂರು ನೀಡಿದ್ದು, ಸ್ಥಳೀಯ ಅರಣ್ಯದಲ್ಲಿ ಶಿಕ್ಷಕ ಅತ್ಯಾಚಾರ ಎಸಗಿದ್ದಾಗಿ ದೂರಿದ್ದಾಳೆ.
ಘಟನೆ ಜುಲೈ 11ರಂದು ವಿದ್ಯಾರ್ಥಿನಿ ಕಾಲೇಜಿಗೆ ಹೋಗುತ್ತಿದ್ದಾಗ ನಡೆದಿದ್ದರೂ, ಬುಧವಾರ ವಿದ್ಯಾರ್ಥಿನಿ ದೂರು ನೀಡಿದ ಬಳಿಕವಷ್ಟೇ ಬೆಳಕಿಗೆ ಬಂದಿದೆ. ಅತ್ಯಾಚಾರ ಘಟನೆ ಕುರಿತ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಗಮನಕ್ಕೆ ಬಂದ ಬಳಿಕ ದೂರು ನೀಡಲಾಗಿತ್ತು.
ಆಲ್ಬಮ್ ಹಾಡು ಚಿತ್ರೀಕರಣ ನಡೆಯುತ್ತಿರುವ ಸ್ಥಳಕ್ಕೆ ತನ್ನೊಂದಿಗೆ ಬರುವಂತೆ ಹೇಳಿ ಕರೆದೊಯ್ದ. ಆದರೆ ಅರಣ್ಯಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ ಎಂದು ಹೇಳಲಾಗಿದೆ.
ಸುಂದರಗಢ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಮತ್ತೊಂದು ಪ್ರಕರಣದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.
Next Story