ಶಮಿ ಬಂಧನ ವಾರೆಂಟ್ ಗೆ ಮಧ್ಯಾಂತರ ತಡೆಯಾಜ್ಞೆ ನೀಡಿದ ಜಿಲ್ಲಾ ನ್ಯಾಯಾಲಯ
ಕೋಲ್ಕತಾ , ಸೆ.10:ಪತ್ನಿಗೆ ಕೌಟುಂಬಿಕ ದೌರ್ಜನ್ಯ ನೀಡಿದ ಆರೋಪಕ್ಕೆ ಸಂಬಂಧಿಸಿ ಕ್ರಿಕೆಟಿಗ ಮುಹಮ್ಮದ್ ಶಮಿ ವಿರುದ್ಧ ಸ್ಥಳೀಯ ನ್ಯಾಯಾಲಯ ಹೊರಡಿಸಿದ್ದ ಬಂಧನ ವಾರಂಟ್ ಗೆ ಪಶ್ಚಿಮ ಬಂಗಾಳದ ಅಲಿಪೋರ್ ಜಿಲ್ಲಾ ನ್ಯಾಯಾಲಯ ಎರಡು ತಿಂಗಳ ಮಧ್ಯಾಂತರ ತಡೆಯಾಜ್ಞೆ ನೀಡಿದೆ.
ಪ್ರಕರಣದ ಮುಂದಿನ ವಿಚಾರಣೆಯನ್ನು ನ್ಯಾಯಾಲಯವು ನವೆಂಬರ್ 2 ರಂದು ನಡೆಸಲಿದೆ.
ಶಮಿ ವಿರುದ್ಧ ಪತ್ನಿ ಹಸೀನ್ ಜಹಾನ್ ವರದಕ್ಷಿಣೆ ಮತ್ತು ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿ ಸ್ಥಳೀಯ ನ್ಯಾಯಾಲಯವು ಕಳೆದ ವಾರ ಶಮಿಗೆ 15 ದಿನಗಳ ಒಳಗಾಗಿ ನ್ಯಾಯಾಲಯಕ್ಕೆ ಹಾಜರಾಗುವಂತೆ ವಾರೆಂಟ್ ಹೊರಡಿಸಿತ್ತು.
Next Story