ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಸಿಎಎ ವಿರುದ್ಧ ನಿರ್ಣಯ
ಕೋಲ್ಕತಾ,ಜ.27: ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ನಿರ್ಣಯವನ್ನು ಪಶ್ಚಿಮ ಬಂಗಾಳ ವಿಧಾನಸಭೆಯು ಸೋಮವಾರ ಅಂಗೀಕರಿಸಿದ್ದು, ಸಿಎಎ ವಿರುದ್ಧ ನಿರ್ಣಯ ಕೈಗೊಂಡ ನಾಲ್ಕನೇ ರಾಜ್ಯವಾಗಿದೆ ಪಶ್ಚಿಮ ಬಂಗಾಳ.
ಸಂಸದೀಯ ವ್ಯವಹಾರಗಳ ಸಚಿವ ಪಾರ್ಥಾ ಚಟರ್ಜಿ ಅವರು ರಾಜ್ಯ ವಿಧಾನಸಭೆಯಲ್ಲಿ ಮಂಡಿಸಿದ ಈ ನಿರ್ಣಯವು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ರದ್ದುಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತದೆ ಮತ್ತು ಎನ್ಆರ್ಸಿ ಅನುಷ್ಠಾನಗೊಳಿಸುವ ಮತ್ತು ಎನ್ಪಿಆರ್ ನವೀಕರಿಸುವ ಯೋಜನೆಗಳನ್ನು ಹಿಂತೆಗೆದುಕೊಳ್ಳಬೇಕು ಕೇಂದ್ರ ಸರಕಾರವನ್ನು ಆಗ್ರಹಿಸಿದೆ.
ರಾಜ್ಯ ಸಂಸದೀಯ ವ್ಯವಹಾರಗಳ ಸಚಿವ ಪಾರ್ಥಾ ಚಟರ್ಜಿ ಅವರು ಮಧ್ಯಾಹ್ನ 2 ಗಂಟೆ ಸುಮಾರಿಗೆ ಸದನದಲ್ಲಿ ಈ ನಿರ್ಣಯವನ್ನು ಮಂಡಿಸಿದರು.
ಕೇರಳ, ರಾಜಸ್ಥಾನ ಮತ್ತು ಪಂಜಾಬ್ ರಾಜ್ಯಗಳು ಈಗಾಗಲೇ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಿರ್ಣಯಗಳನ್ನು ಅಂಗೀಕರಿಸಿದೆ.
Next Story