ಮಾ.5ರಂದು ಒಮರ್ ಅಬ್ದುಲ್ಲಾ ಬಂಧನವನ್ನು ಪ್ರಶ್ನಿಸಿರುವ ಅರ್ಜಿಯ ವಿಚಾರಣೆ
ಹೊಸದಿಲ್ಲಿ,ಮಾ.2: ಸಾರ್ವಜನಿಕ ಭದ್ರತಾ ಕಾಯ್ದೆ (ಪಿಎಸ್ಎ)ಯಡಿ ತನ್ನ ಸೋದರ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಅವರ ಬಂಧನವನ್ನು ಪ್ರಶ್ನಿಸಿ ಸಾರಾ ಅಬ್ದುಲ್ಲಾ ಪೈಲಟ್ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಮಾ.5ರಂದು ನಡೆಸುವುದಾಗಿ ಸರ್ವೋಚ್ಚ ನ್ಯಾಯಾಲಯವು ಸೋಮವಾರ ತಿಳಿಸಿದೆ.
ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸಾರಾ ಅರ್ಜಿಗೆ ಜಮ್ಮು-ಕಾಶ್ಮೀರ ಆಡಳಿತದ ಉತ್ತರವನ್ನು ನ್ಯಾಯಮೂರ್ತಿಗಳಾದ ಅರುಣ ಮಿಶ್ರಾ ಮತ್ತು ಇಂದಿರಾ ಬ್ಯಾನರ್ಜಿ ಅವರ ಪೀಠಕ್ಕೆ ಸಲ್ಲಿಸಿದರು.
ಸರ್ವೋಚ್ಚ ನ್ಯಾಯಾಲಯದ ಹಿಂದಿನ ತೀರ್ಪೊಂದನ್ನು ಪ್ರಸ್ತಾಪಿಸಿದ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರು,ಬಂಧನದ ವಿಷಯದಲ್ಲಿ ಅರ್ಜಿದಾರರು ಮೊದಲು ಉಚ್ಚ ನ್ಯಾಯಾಲಯವನ್ನು ಸಂಪರ್ಕಿಸಬೇಕಾಗುತ್ತದೆ ಎಂದು ಹೇಳಿದರು.
Next Story