ಮೇ 31ರಂದು ನಡೆಯಬೇಕಿದ್ದ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ ಮುಂದೂಡಿಕೆ
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ,ಮೇ 4: ಕೊರೋನ ವೈರಸ್ ಸಾಂಕ್ರಾಮಿಕ ಪಿಡುಗು ಮತ್ತು ದೇಶವ್ಯಾಪಿ ಲಾಕ್ಡೌನ್ ಹಿನ್ನೆಲೆಯಲ್ಲಿ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ)ವು ಮೇ 31ರಂದು ನಡೆಯಬೇಕಿದ್ದ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಿದೆ.
ಲಾಕಡೌನ್ ಸ್ಥಿತಿಯನ್ನು ಪುನರ್ಪರಿಶೀಲಿಸಲು ಸೋಮವಾರ ಇಲ್ಲಿ ನಡೆದ ಆಯೋಗದ ಸಭೆಯಲ್ಲಿ ಈಗಾಗಲೇ ಎರಡು ಬಾರಿ ಮುಂದೂಡಲ್ಪಟ್ಟಿರುವ ಪರೀಕ್ಷೆಯನ್ನು ಮತ್ತೆ ಮುಂದೂಡಲು ನಿರ್ಧರಿಸಲಾಯಿತು.
ಲಾಕ್ಡೌನ್ ಸ್ಥಿತಿಯ ಮೇಲೆ ತಾನು ನಿಗಾ ಇರಿಸಲಿದ್ದು,ಮೇ 20 ರಂದು ಪರೀಕ್ಷೆಯ ಹೊಸ ದಿನಾಂಕವನ್ನು ನಿರ್ಧರಿಸಲಾಗುವುದು. ಅಭ್ಯರ್ಥಿಗಳಿಗೆ 30 ದಿನಗಳ ಮೊದಲೇ ಪರೀಕ್ಷೆಯ ಮಾಹಿತಿ ದೊರೆಯುವಂತೆ ನೋಡಿಕೊಳ್ಳಲಾಗುವುದು ಎಂದು ಯುಪಿಎಸ್ಸಿ ಪ್ರಕಟಣೆಯಲ್ಲಿ ತಿಳಿಸಿದೆ.
Next Story