ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ, ತಾಯಿಗೆ ಕೊರೋನ ವೈರಸ್: ವರದಿ
ಹೊಸದಿಲ್ಲಿ: ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಅವರ ತಾಯಿ ಮಾಧವಿ ರಾಜೆಯವರಿಗೆ ಕೊರೋನ ಸೋಂಕು ತಗಲಿರುವುದು ದೃಢಪಟ್ಟಿದ್ದು, ಅವರನ್ನು ದಿಲ್ಲಿಯ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು indiatoday.in ವರದಿ ಮಾಡಿದೆ.
ಕೊರೋನವೈರಸ್ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಸಿಂಧಿಯಾರನ್ನು ನಾಲ್ಕು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎನ್ನಲಾಗಿದೆ.
Next Story