Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಊರಲ್ಲಿ ಉದ್ಯೋಗದ ಕೊರತೆ, ಆರ್ಥಿಕ...

ಊರಲ್ಲಿ ಉದ್ಯೋಗದ ಕೊರತೆ, ಆರ್ಥಿಕ ಸಂಕಷ್ಟ: ಮತ್ತೆ ನಗರಗಳ ಕಡೆಗೆ ವಲಸೆ ಕಾರ್ಮಿಕರು

ವಾರ್ತಾಭಾರತಿವಾರ್ತಾಭಾರತಿ3 Aug 2020 9:43 PM IST
share
ಊರಲ್ಲಿ ಉದ್ಯೋಗದ ಕೊರತೆ, ಆರ್ಥಿಕ ಸಂಕಷ್ಟ: ಮತ್ತೆ ನಗರಗಳ ಕಡೆಗೆ ವಲಸೆ ಕಾರ್ಮಿಕರು

ಹೊಸದಿಲ್ಲಿ, ಆ.3: ಕೊರೋನ ಸೋಂಕಿನ ಹಿನ್ನೆಲೆಯಲ್ಲಿ ಜಾರಿಗೊಂಡ ಲಾಕ್‌ಡೌನ್‌ನಿಂದ ಇಕ್ಕಟ್ಟಿಗೆ ಸಿಲುಕಿ, ಹರಸಾಹಸ ಪಟ್ಟು ತಮ್ಮ ಸ್ವಂತ ಊರಿಗೆ ತೆರಳಿದ್ದ ವಲಸೆ ಕಾರ್ಮಿಕರಲ್ಲಿ ಮೂರನೇ ಎರಡರಷ್ಟು ಮಂದಿ ಈಗ ಮತ್ತೆ ನಗರಕ್ಕೆ ಮರಳಿದ್ದಾರೆ ಅಥವಾ ಮರಳುವ ಬಯಕೆ ವ್ಯಕ್ತಪಡಿಸಿದ್ದಾರೆ ಎಂದು ಸಮೀಕ್ಷೆಯೊಂದ ವರದಿ ತಿಳಿಸಿದೆ.

ಊರಿನಲ್ಲಿ ಸೂಕ್ತ ಉದ್ಯೋಗದ ಅಲಭ್ಯತೆ ಮತ್ತು ಹೆಚ್ಚುತ್ತಿರುವ ಆರ್ಥಿಕ ಹೊರೆಯಿಂದ ಕಂಗೆಟ್ಟಿರುವ ವಲಸೆ ಕಾರ್ಮಿಕರು ಈಗ ಉಲ್ಬಣಗೊಂಡಿರುವ ಕೊರೋನ ಸೋಂಕಿನ ಮಧ್ಯೆಯೇ ಮತ್ತೆ ನಗರದತ್ತ ಮುಖ ಮಾಡುತ್ತಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

‘ಒಳನಾಡಿನಲ್ಲಿ ಅನ್‌ಲಾಕ್ ಪ್ರಕ್ರಿಯೆ ಹೇಗಿದೆ’ ಎಂಬ ಕುರಿತು ನಡೆಸಲಾದ ಅಧ್ಯಯನದಲ್ಲಿ 11 ರಾಜ್ಯಗಳ 48 ಜಿಲ್ಲೆಗಳಲ್ಲಿ, 4,835 ಕುಟುಂಬಗಳನ್ನು ಸಮೀಕ್ಷೆಗೆ ಒಳಪಡಿಸಲಾಗಿದೆ . ಆಗಾ ಖಾನ್ ರೂರಲ್ ಸಪೋರ್ಟ್ ಪ್ರೋಗ್ರಾಂ(ಇಂಡಿಯಾ), ಆ್ಯಕ್ಷನ್ ಫಾರ್ ಸೋಷಿಯಲ್ ಅಡ್ವಾನ್ಸ್‌ಮೆಂಟ್, ಗ್ರಾಮೀಣ ಸಹಾರಾ, ಐ-ಸಕ್ಷಮ್, ಪ್ರದಾನ್, ಸಾಥಿ-ಅಪ್, ಸೆಸ್ಟಾ, ಸೇವಾ ಮಂದಿರ ಮತ್ತು ಟ್ರಾನ್ಸ್‌ಫಾರ್ಮ್ ರೂರಲ್ ಇಂಡಿಯಾ ಫೌಂಡೇಶನ್ ಜೂನ್ 24ರಿಂದ ಜುಲೈ 8ರ ಅವಧಿಯಲ್ಲಿ ಈ ಸಮೀಕ್ಷೆ ನಡೆಸಿವೆ.

ತಮ್ಮ ಹಳ್ಳಿಗೆ ಹಿಂದಿರುಗಿದ್ದ 29% ವಲಸೆ ಕಾರ್ಮಿಕರು ಮತ್ತೆ ನಗರಕ್ಕೆ ಹಿಂದಿರುಗಿದ್ದರೆ, 45% ಕಾರ್ಮಿಕರು ನಗರಕ್ಕೆ ಹಿಂದಿರುಗಲು ಬಯಸಿದ್ದಾರೆ. ಹಳ್ಳಿಗೆ ಹಿಂದಿರುಗಿದ ಕಾರ್ಮಿಕರು ಕೂಲಿ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ಹಳ್ಳಿಗಳಲ್ಲಿ ಕುಶಲ ಕರ್ಮಿಗಳಿಗೆ ಉದ್ಯೋಗದ ಕೊರತೆ ಕಾರ್ಮಿಕರು ಮರಳಿ ನಗರದತ್ತ ಮುಖ ಮಾಡಲು ಪ್ರಧಾನ ಕಾರಣವಾಗಿದೆ . ಹಳ್ಳಿಗೆ ಮರಳಿರುವ ಕಾರ್ಮಿಕರಲ್ಲಿ 25% ಜನ ಇನ್ನೂ ಕೆಲಸದ ಹುಡುಕಾಟದಲ್ಲಿದ್ದಾರೆ. 24% ಕುಟುಂಬಗಳು ತಮ್ಮ ಮಕ್ಕಳನ್ನು ಶಾಲೆ ಬಿಡಿಸುವ ಬಗ್ಗೆ ಯೋಚಿಸುತ್ತಿದ್ದಾರೆ.

ಕೊರೋನ ಸೋಂಕಿನಿಂದ ಗ್ರಾಮೀಣ ಭಾರತದ ಜನತೆಯಲ್ಲಿ ಆರೋಗ್ಯದ ಸಮಸ್ಯೆ ಹೆಚ್ಚಿದೆ. ದೈನಂದಿನ ಆಹಾರದ ಬಳಕೆ ಕಡಿಮೆಯಾಗಿದೆ ಎಂದು 43% ಜನ ಹೇಳಿದ್ದರೆ, ಆಹಾರದ ಪ್ರಮಾಣವನ್ನು ಸ್ವತಃ ಕಡಿಮೆ ಮಾಡಿರುವುದಾಗಿ 55% ಜನ ಅಭಿಪ್ರಾಯಪಟ್ಟಿದ್ದಾರೆ. ಲಾಕ್‌ಡೌನ್ ಅವಧಿಗೆ ಹೋಲಿಸಿದರೆ, ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ದೊರಕುವ ಪಡಿತರದಿಂದಾಗಿ ಈಗ ಪರಿಸ್ಥಿತಿ ಸಾಕಷ್ಟು ಸುಧಾರಿಸಿರುವುದು ಗಮನಕ್ಕೆ ಬಂದಿದೆ ಎಂದು ಅಧ್ಯಯನದ ವರದಿ ಹೇಳಿದೆ. ಆರ್ಥಿಕ ಮುಗ್ಗಟ್ಟಿನಿಂದಾಗಿ ಹಣ ಸಾಲ ಪಡೆಯುವ ಅನಿವಾರ್ಯತೆ ಎದುರಾಗಿದ್ದು ಕುಟುಂಬಕ್ಕೆ ಸಂಬಂಧಿಸಿದವರಿಂದ ಸಾಲ ಪಡೆದಿರುವುದಾಗಿ 10% ಕಾರ್ಮಿಕರು ಹೇಳಿದ್ದರೆ, ಖಾಸಗಿ ಲೇವಾದೇವಿದಾರರಿಂದ ಸಾಲ ಪಡೆದಿರುವುದಾಗಿ 7% ಕಾರ್ಮಿಕರು ಹೇಳಿದ್ದಾರೆ.

ಸಮೀಕ್ಷೆಗೆ ಒಳಪಟ್ಟ ಕಾರ್ಮಿಕರಲ್ಲಿ 71% ಕುಟುಂಬದವರು ಅಡುಗೆ ಅನಿಲದ ಸೌಲಭ್ಯ ಹೊಂದಿದ್ದು ಇದರಲ್ಲಿ 85% ಕುಟುಂಬ ಉಜ್ವಲ ಯೋಜನೆಯ ಫಲಾನುಭವಿಗಳಾಗಿದ್ದಾರೆ. 90% ಕುಟುಂಬ ಪಿಎಂ-ಕಿಸಾನ್ ಯೋಜನೆಯ ಫಲಾನುಭವಿಗಳು ಮತ್ತು ಇವರಲ್ಲಿ 38% ಕುಟುಂಬಕ್ಕೆ ಸರಕಾರದ 2000 ರೂ. ಸಹಾಯಧನ ದೊರಕಿದೆ ಎಂದು ಸಮೀಕ್ಷೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.

ಆರ್ಥಿಕ ಸಮಸ್ಯೆ: ಜಾನುವಾರು ಮಾರಾಟ

ಲಾಕ್‌ಡೌನ್ ಕಾರಣದಿಂದ ಉಂಟಾಗಿರುವ ಆರ್ಥಿಕ ಸಮಸ್ಯೆಯಿಂದ ಮನೆಯಲ್ಲಿದ್ದ ಹಲವು ವಸ್ತುಗಳನ್ನು ಮಾರಾಟ ಮಾಡಿರುವುದಾಗಿ 6% ವಲಸೆ ಕಾರ್ಮಿಕರು ಹೇಳಿದ್ದರೆ, ಆರ್ಥಿಕ ಸಂಕಷ್ಟದಿಂದ ಮನೆಯಲ್ಲಿದ್ದ ಜಾನುವಾರುಗಳನ್ನು ಮಾರಬೇಕಾಯಿತು ಎಂದು 15% ಕಾರ್ಮಿಕರು ಹೇಳಿದ್ದಾರೆ. 2% ಕಾರ್ಮಿಕರು ಹಾಲುಕೊಡುವ ಹಸುಗಳನ್ನು ಮಾರಿದ್ದಾರೆ.

ಅಲ್ಲದೆ 2% ಕಾರ್ಮಿಕರು ತಮ್ಮ ಜಮೀನನ್ನು ಅಡವಿರಿಸಿ ಸಾಲ ಪಡೆದಿದ್ದರೆ, 1% ಕಾರ್ಮಿಕರು ತಮ್ಮ ಜಮೀನನ್ನೇ ಮಾರಿರುವುದು ಸಮೀಕ್ಷೆಯಿಂದ ತಿಳಿದು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X