‘ಅಮಿತ್ ಶಾ ಅವರಿಗೆ ಕೊರೋನ ನೆಗೆಟಿವ್’ ಎಂಬ ಟ್ವೀಟ್ ಡಿಲಿಟ್ ಮಾಡಿದ ಬಿಜೆಪಿ ಸಂಸದ ಮನೋಜ್ ತಿವಾರಿ
ಹೊಸದಿಲ್ಲಿ: ಗೃಹ ಸಚಿವ ಅಮಿತ್ ಶಾ ಅವರಿಗೆ ಕೊರೋನ ಪರೀಕ್ಷೆಯಲ್ಲಿ ನೆಗೆಟಿವ್ ಫಲಿತಾಂಶ ಬಂದಿದೆ ಎಂದು ಟ್ವೀಟ್ ಮಾಡಿದ್ದ ಬಿಜೆಪಿ ನಾಯಕ ಮನೋಜ್ ತಿವಾರಿ ಇದೀಗ ಆ ಟ್ವೀಟನ್ನು ಡಿಲಿಟ್ ಮಾಡಿದ್ದಾರೆ.
ವಾರದ ಹಿಂದಷ್ಟೇ ಅಮಿತ್ ಶಾ ಅವರಿಗೆ ಕೊರೋನ ಪಾಸಿಟಿವ್ ಆಗಿದ್ದು, ಹರ್ಯಾಣದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮನೋಜ್ ತಿವಾರಿ ಟ್ವೀಟ್ ಬಳಿಕ ಪ್ರತಿಕ್ರಿಯೆ ನೀಡಿದ್ದ ಕೇಂದ್ರ ಗೃಹ ಸಚಿವಾಲಯ , ಅಮಿತ್ ಶಾ ಅವರಿಗೆ ಹೊಸದಾಗಿ ಪರೀಕ್ಷೆ ನಡೆಸಿಲ್ಲ ಎಂದಿದೆ.
Next Story