ಕೇಂದ್ರ ಸಚಿವ ಕೆಪಿ ಗುರ್ಜಾರ್ಗೆ ಕೊರೋನ ಸೋಂಕು
Photo: twitter.com/KPGBJP/photo
ಹೊಸದಿಲ್ಲಿ, ಆ.27: ಕೇಂದ್ರ ಸರಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ಸಹಾಯಕ ಸಚಿವ ಕೃಷನ್ಪಾಲ್ ಗುರ್ಜಾರ್ಗೆ ಕೊರೋನ ಸೋಂಕು ದೃಢಪಟ್ಟಿದೆ ಎಂದು ವರದಿಯಾಗಿದೆ.
ಈ ವಿಷಯವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ದೃಢಪಡಿಸಿರುವ ಗುರ್ಜಾರ್, ತನ್ನೊಂದಿಗೆ ಸಂಪರ್ಕದಲ್ಲಿದ್ದ ಎಲ್ಲರೂ ಮುನ್ನೆಚ್ಚರಿಕೆ ಕ್ರಮವಾಗಿ ಕೊರೋನ ಪರೀಕ್ಷೆಗೆ ಒಳಪಡುವಂತೆ ಒತ್ತಾಯಿಸಿದ್ದಾರೆ. ವೈದ್ಯರಲ್ಲಿ ತಪಾಸಣೆ ನಡೆಸಿದಾಗ ಕೊರೋನ ಸೋಂಕಿನ ಪಾಸಿಟಿವ್ ವರದಿ ಬಂದಿದೆ. ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಕೊರೋನದ ಬಗ್ಗೆ ನಿರ್ಲಕ್ಷ ವಹಿಸಬಾರದು. ತನ್ನೊಂದಿಗೆ ಸಂಪರ್ಕದಲ್ಲಿದ್ದವರು ತಕ್ಷಣ ಕೊರೋನ ಪರೀಕ್ಷೆ ನಡೆಸಬೇಕು ಎಂದು ಗುರ್ಜಾರ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
Next Story