ಈ ವರ್ಷ ಗಡಿ ನಿಯಂತ್ರಣ ರೇಖೆಯಲ್ಲಿ 3,000ಕ್ಕೂ ಅಧಿಕ ಬಾರಿ ಕದನ ವಿರಾಮ ಉಲ್ಲಂಘನೆ: ಸರಕಾರದ ಮಾಹಿತಿ
ಹೊಸದಿಲ್ಲಿ; 2020ರ ಜನವರಿ 1ರಿಂದ ಸೆಪ್ಟಂಬರ್ 7ರವರೆಗೆ ಜಮ್ಮುವಿನ ವ್ಯಾಪ್ತಿಯ ಗಡಿ ನಿಯಂತ್ರಣ ರೇಖೆಯುದ್ದಕ್ಕೂ 3,186 ಬಾರಿ ಕದನ ವಿರಾಮ ಉಲ್ಲಂಘಿಸಲಾಗಿದೆ ಎಂದು ರಾಜ್ಯಸಭೆಯಲ್ಲಿ ಕೇಂದ್ರ ಸಚಿವ ಶ್ರೀಪಾದ್ ನಾಯ್ಕ್ ಮಾಹಿತಿ ನೀಡಿದ್ದಾರೆ.
ಜನವರಿ 1ರಿಂದ ಆಗಸ್ಟ್ 31ರವರೆಗೆ ಜಮ್ಮು ವ್ಯಾಪ್ತಿಯ ಭಾರತ-ಪಾಕಿಸ್ತಾನ ಗಡಿಯಲ್ಲಿ ಗುಂಡಿನ ಚಕಮಕಿ ನಡೆದ 242 ಘಟನೆಗಳು ವರದಿಯಾಗಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಇತ್ತೀಚೆಗಷ್ಟೇ ಸೆಪ್ಟಂಬರ್ 7ರಂದು ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಕದನ ವಿರಾಮ ಉಲ್ಲಂಘನೆ ನಡೆದಿತ್ತು.
Next Story