--

ಒಂದು ಲೋಕಸಭಾ ಮತ್ತು 56 ವಿಧಾನಸಭಾ ಸ್ಥಾನಗಳಿಗೆ ನ.3 ಮತ್ತು 7ರಂದು ಉಪಚುನಾವಣೆ

ಹೊಸದಿಲ್ಲಿ,ಸೆ.29: ಬಿಹಾರದ ಒಂದು ಲೋಕಸಭಾ ಮತ್ತು 10 ರಾಜ್ಯಗಳಲ್ಲಿ ಹರಡಿಕೊಂಡಿರುವ 56 ವಿಧಾನಸಭಾ ಸ್ಥಾನಗಳಿಗೆ ನ.3 ಮತ್ತು ನ.7ರಂದು ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗವು ಮಂಗಳವಾರ ಪ್ರಕಟಿಸಿದೆ. ಕರ್ನಾಟಕ, ಛತ್ತೀಸ್‌ಗಡ, ಗುಜರಾತ್, ಜಾರ್ಖಂಡ್, ಮಧ್ಯಪ್ರದೇಶ, ಮಣಿಪುರ, ನಾಗಾಲ್ಯಾಂಡ್, ಒಡಿಶಾ, ತೆಲಂಗಾಣ ಮತ್ತು ಉತ್ತರ ಪ್ರದೇಶ ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆಗಳು ನಡೆಯಲಿರುವ ರಾಜ್ಯಗಳಾಗಿವೆ. ಮತಎಣಿಕೆ ನ.10ರಂದು ನಡೆಯಲಿದೆ.

  ನ.3ರಂದು 54 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ. ಬಿಹಾರದ ಒಂದು ಲೋಕಸಭಾ ಕ್ಷೇತ್ರ ಮತ್ತು ಮಣಿಪುರದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನ.7ರಂದು ನಡೆಯಲಿದೆ ಎಂದು ಆಯೋಗವು ತಿಳಿಸಿದೆ.

ಹವಾಮಾನ ಸ್ಥಿತಿಗಳು, ಭದ್ರತಾ ಪಡೆಗಳ ರವಾನೆ, ಕೊರೋನ ವೈರಸ್ ಸಾಂಕ್ರಾಮಿಕ ಇತ್ಯಾದಿಗಳಂತಹ ವಿವಿಧ ಅಂಶಗಳನ್ನು ಪರಿಗಣನೆಗೆ ತೆದುಕೊಂಡ ಬಳಿಕ ಉಪ ಚುನಾವಣೆಗಳನ್ನು ನಡೆಸಲು ನಿರ್ಧರಿಸಲಾಗಿದೆ ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ.

ಮಧ್ಯಪ್ರದೇಶವು ಉಪಚುನಾವಣೆಗಳು ನಡೆಯುವ ಗರಿಷ್ಠ (22)ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ. ಈ ಪೈಕಿ ಹೆಚ್ಚಿನವು ಜ್ಯೋತಿರಾದಿತ್ಯ ಸಿಂಧಿಯಾ ಬಣವು ಕಾಂಗ್ರೆಸ್‌ ನಿಂದ ಬಿಜೆಪಿಗೆ ನಿಷ್ಠೆ ಬದಲಿಸಿದ ಬಳಿಕ ತೆರವಾಗಿದ್ದವು. ಗುಜರಾತಿನಲ್ಲಿ ಎಂಟು ಮತ್ತು ಉತ್ತರ ಪ್ರದೇಶದಲ್ಲಿ ಏಳು ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆಗಳು ನಡೆಯಲಿವೆ.

ನಾಲ್ಕು ರಾಜ್ಯಗಳಲ್ಲಿ ಉಪಚುನಾವಣೆ ಸದ್ಯಕ್ಕಿಲ್ಲ

 ಉಪಚುನಾವಣೆಗಳ ಘೋಷಣೆಗೆ ಮುನ್ನ ಮಂಗಳವಾರ ಹೊರಡಿಸಿದ ಪ್ರತ್ಯೇಕ ಹೇಳಿಕೆಯಲ್ಲಿ ಆಯೋಗವು, ಆಯಾ ರಾಜ್ಯಗಳ ನಿರ್ದಿಷ್ಟ ಕೋರಿಕೆಯ ಮೇರೆಗೆ ಕೇರಳ (2), ತಮಿಳುನಾಡು (2), ಅಸ್ಸಾಂ (2) ಮತ್ತು ಪಶ್ಚಿಮ ಬಂಗಾಳ(1)ಗಳಲ್ಲಿ ತೆರವಾಗಿರುವ ಒಟ್ಟು ಏಳು ವಿಧಾನಸಭಾ ಸ್ಥಾನಗಳಿಗೆ ಈ ಹಂತದಲ್ಲಿ ಉಪಚುನಾವಣೆ ನಡೆಸದಿರಲು ನಿರ್ಧರಿಸಿರುವುದಾಗಿ ತಿಳಿಸಿದೆ. ಉಪಚುನಾವಣೆಗಳನ್ನು ನಡೆಸಲು ಸದ್ಯಕ್ಕೆ ಕಷ್ಟವಾಗುತ್ತದೆ ಎಂದು ಈ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಆಯೋಗಕ್ಕೆ ತಿಳಿಸಿದ್ದರು.

ಇತ್ತೀಚಿಗೆ ತೆರವಾಗಿರುವ ಲೋಕಸಭಾ ಮತ್ತು ವಿಧಾನಸಭಾ ಸ್ಥಾನಗಳಿಗೆ ಸಂಬಂಧಿಸಿದಂತೆ ಆಯಾ ರಾಜ್ಯಗಳಿಂದ ಅಗತ್ಯ ಮಾಹಿತಿಗಳನ್ನು ಪಡೆದುಕೊಂಡ ಬಳಿಕ ಆಯೋಗವು ಉಪಚುನಾವಣೆ ನಿರ್ಧಾರವನ್ನು ಕೈಗೊಳ್ಳಲಿದೆ.

 ಆಯೋಗವು ಕಳೆದ ವಾರ ಬಿಹಾರ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದ್ದು,ಅ.28,ನ.3 ಮತ್ತು ನ,7ರಂದು ಮತದಾನ ನಡೆಯಲಿದೆ. ಮತ ಎಣಿಕೆ ನ.10ರಂದು ನಡೆಯಲಿದೆ.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top