ಜಮ್ಮುಕಾಶ್ಮೀರದಲ್ಲಿ ಎನ್ಕೌಂಟರ್: ಇಬ್ಬರು ಶಂಕಿತ ಭಯೋತ್ಪಾದಕರು ಹತ
ಹೊಸದಿಲ್ಲಿ, ಅ. 14: ಜಮ್ಮು ಹಾಗೂ ಕಾಶ್ಮೀರದ ಶೋಪಿಯಾನ ಜಿಲ್ಲೆಯಲ್ಲಿ ಭದ್ರತಾ ಪಡೆ ಬುಧವಾರ ನಡೆಸಿದ ಎನ್ಕೌಂಟರ್ನಲ್ಲಿ ಇಬ್ಬರು ಶಂಕಿತ ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಯೋತ್ಪಾದಕರು ಅಡಗಿರುವ ಕುರಿತು ಮಾಹಿತಿ ಪಡೆದ ಭದ್ರತಾ ಪಡೆ ಶೋಪಿಯಾನ ಜಿಲ್ಲೆಯ ಚಾಕುರ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ನಡೆಸಿತು.
ಶಂಕಿತ ಭಯೋತ್ಪಾದಕರು ಭದ್ರತಾ ಪಡೆ ಮೇಲೆ ಗುಂಡು ಹಾರಿಸಲು ಆರಂಭಿಸಿದ ಬಳಿಕ ಭದ್ರತಾ ಪಡೆಯ ಶೋಧ ಕಾರ್ಯಾಚರಣೆ ಎನ್ಕೌಂಟರ್ಗೆ ತಿರುಗಿತು. ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಆದರೆ, ಅವರ ಗುರುತು ಇದುವರೆಗೆ ಪತ್ತೆಯಾಗಿಲ್ಲ.
ಹತ ಭಯೋತ್ಪಾದಕರ ಗುರುತು ಹಾಗೂ ಅವರ ಸೇರಿದ ಸಂಘಟನೆಯನ್ನು ಇನ್ನಷ್ಟೇ ದೃಢಪಡಿಸಬೇಕಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story