ಆರೋಗ್ಯ ಸೇತು ಆ್ಯಪ್ :ಕೇಂದ್ರ ಸರಕಾರ ಸ್ಪಷ್ಟನೆ
ಹೊಸದಿಲ್ಲಿ: ಆರೋಗ್ಯ ಸೇತು ಆ್ಯಪ್ ನ್ನು ಕೊರೋನ ವೈರಸ್ ವಿರುದ್ಧ ಹೋರಾಡಲು ಸುಮಾರು 21 ದಿನಗಳ ದಾಖಲೆಯ ಸಮಯದಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಅತ್ಯಂತ ಪಾರದರ್ಶಕ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ ಎಂದು ಸರಕಾರವು ಬುಧವಾರ ವಿವರವಾದ ಸ್ಪಷ್ಟೀಕರಣ ನೀಡಿದೆ.
ಭಾರತದಲ್ಲಿ ಕೋವಿಡ್-19 ಸಾಂಕ್ರಾಮಿಕವನ್ನು ನಿಯಂತ್ರಿಸುವ ವಿಚಾರದಲ್ಲಿ ಆರೋಗ್ಯ ಸೇತು ಆ್ಯಪ್ ಪಾತ್ರದ ಯಾವುದೇ ಸಂದೇಹವಿಲ್ಲ ಎಂದು ಕೇಂದ್ರ ಸರಕಾರ ತಿಳಿಸಿದೆ.
ಆರೋಗ್ಯ ಸೇತು ಆ್ಯಪ್ ಅನ್ನು ಯಾರು ಸಿದ್ಧಪಡಿಸಿದ್ದರು. ಅದರ ಕುರಿತಾದ ಕಡತಗಳು ಎಲ್ಲಿವೆ ಎಂಬ ಮಾಹಿತಿ ನೀಡಲು ವಿಫಲರಾಗಿರುವ ಪ್ರಾಧಿಕಾರಗಳನ್ನು ತರಾಟೆಗೆ ತೆಗೆದುಕೊಂಡಿರುವ ಕೇಂದ್ರ ಮಾಹಿತಿ ಆಯೋಗ ಮಂಗಳವಾರದಂದು ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿ, ವಿದ್ಯುನ್ಮಾನ ಸಚಿವಾಲಯ, ರಾಷ್ಟ್ರೀಯ ಮಾಹಿತಿ ಕೇಂದ್ರ ಹಾಗೂ ರಾಷ್ಟ್ರೀಯ ಇ-ಗವರ್ನೆನ್ಸ್ ಇಲಾಖೆಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿತ್ತು.
Next Story