ಜಮ್ಮು-ಕಾಶ್ಮೀರ: ಇಬ್ಬರು ಉಗ್ರರ ಹತ್ಯೆ
ಶ್ರೀನಗರ, ಅ.28: ಜಮ್ಮು ಕಾಶ್ಮೀರದ ಬುದ್ಗಾಂವ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಜಿಲ್ಲೆಯ ಛಡೂರ ಪ್ರದೇಶದಲ್ಲಿ ಭಯೋತ್ಪಾದಕರ ಚಲನ ವಲನದ ಬಗ್ಗೆ ದೊರೆತ ಮಾಹಿತಿಯ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ಆರಂಭಿಸಿವೆ. ಆಗ ಉಗ್ರರು ಭದ್ರತಾ ಪಡೆಯತ್ತ ಗುಂಡಿನ ದಾಳಿ ಆರಂಭಿಸಿದ್ದಾರೆ. ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿವೆ ಎಂದು ಪೊಲೀಸರು ಹೇಳಿದ್ದಾರೆ.
ಮೃತ ಉಗ್ರರಲ್ಲಿ ಒಬ್ಬ ವಿದೇಶೀಯ ಎಂಬುದು ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Next Story